ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕಾಂಗ್ರೆಸ್ ಪಕ್ಷ ಹಿನ್ನಡೆಯನ್ನು ಅನುಭವಿಸಿದೆ ಎಂದು ಶ್ರೀಕಂಠದತ್ತ ಒಡೆಯರ್ ಹೈಕಮಾಂಡ್‌ಗೆ ಬರೆದಿರುವ ಪತ್ರ ಈಗ ಚರ್ಚೆಗೆ ವೇದಿಕೆಯಾಗಿದೆ. ಈ ಮೂಲಕ ಕಾಂಗ್ರೆಸ್‌ನಲ್ಲಿದ್ದ ಭಿನ್ನಮತ ಮತ್ತೆ ಸ್ಪೋಟಗೊಂಡಿದೆ.
ಇಂದು ನಡೆದ ಮೈಸೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶ್ರೀಕಂಠದತ್ತ ಒಡೆಯರ್ ಬೆಂಬಲಿಗರು ಸಭೆ ನಡೆಸಿ ಸಿದ್ದರಾಮಯ್ಯನವರು ಕಾರ್ಯಕರ್ತರ ಬಗ್ಗೆ ನಿರ್ಲಕ್ಷ್ಯ ಭಾವನೆಯನ್ನು ಹೊಂದಿದ್ದಾರೆ ಎಂದು ದೂರಿದ್ದಾರೆ. ಇದರಿಂದ ಮೂಲ ಹಾಗೂ ವಲಸಿಗರ ನಡುವೆ ಮತ್ತೆ ಜಟಾಪಟಿಗೆ ಕಾರಣವಾಗಿದೆ.
ಸಿದ್ದರಾಮಯ್ಯನವರ ಬೆಂಬಲಿಗರಿಗೆ ಟಿಕೆಟ್ ನೀಡಬಾರದು. ಅಲ್ಲದೆ, ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಪತ್ರದಲ್ಲಿ ಶೀಕಂಠದತ್ತ ಒಡೆಯರ್ ಆಗ್ರಹಿಸಿದ್ದಾರೆ. ಈ ಮಧ್ಯೆ ಈ ಹೇಳಿಕೆಯನ್ನು ಸಿದ್ದರಾಮಯ್ಯ ಬಣದ ಕಾರ್ಯಕರ್ತರು ತೀವ್ರವಾಗಿ ವಿರೋಧಿಸಿದ್ದು, ಕಾಂಗ್ರೆಸ್‌ನಲ್ಲಿ ಎರಡು ಗುಂಪುಗಳಾಗಿ ಭಾಗವಾಗಿದೆ.
ಈ ಮೂಲಕ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಗೊಂದಲಗಳು ಸೃಷ್ಟಿಯಾಗಿದೆ. ಈ ಹಿಂದೆ ಸಿದ್ದರಾಮಯ್ಯ-ಮಹದೇವ್‌ರವರ ಜಟಾಪಟಿಯ ಬೆನ್ನಲ್ಲೆ ವಿಶ್ವನಾಥ್‌ರವರ ಪುಸ್ತಕ ವಿವಾದ ತಲೆಎತ್ತಿದ್ದು, ಈಗ ಮತ್ತೆ ಸಮಸ್ಯೆಗಳು ತಲೆದೋರಿವೆ. ಒಟ್ಟಾರೆಯಾಗಿ ಕಾಂಗ್ರೆಸ್ ಪಕ್ಷ ಒಗ್ಗಟ್ಟನ್ನು ಸಾಧಿಸುವಲ್ಲಿ ವಿಫಲವಾಗಿದೆ.
|