ರಾಜ್ಯದ ಅಭಿವೃದ್ದಿಗೆ ಕಾಂಗ್ರೆಸ್ಸಿಗರು ಕಂಟಕವಾಗಿದ್ದಾರೆ ಎಂದು ಮಾಜಿ ಸಚಿವ ಆರ್. ಅಶೋಕ್ ಆರೋಪಿಸಿದ್ದಾರೆ.
ಬಿಜೆಪಿಯು ದಾಸರಹಳ್ಳಿ ಮಂಡಲ ವತಿಯಿಂದ ಜಾಲಹಳ್ಳಿ ಕ್ರಾಸ್ ಸಮೀಪ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ ಅವರು, ಕಾಂಗ್ರೆಸ್ ಅಭಿವೃದ್ದಿಗೆ ತಡೆ ನೀಡಿದ್ದು, ಕಾಂಗ್ರೆಸ್‌ನ್ನು ರಾಜ್ಯದಿಂದಲೇ ಓಡಿಸಬೇಕೆಂದು ಮತದಾರರಿಗೆ ಕರೆ ನೀಡಿದ್ದಾರೆ.
ತಾವು ಮಾಡಿರುವ ತಪ್ಪನ್ನು ಮುಚ್ಚಿ ವಿನಾ ಕಾರಣ ಬೇರೊಬ್ಬರ ಮೇಲೆ ಹಾಕುತ್ತಾ ಬಂದಿರುವ ಕಾಂಗ್ರೆಸ್ ನೀತಿಗಳು ಕಳೆದ 50 ವರ್ಷಗಳಲ್ಲಿ ರಾಜ್ಯದ ಅಭಿವೃದ್ದಿ ಕುಂಠಿತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿನ ಭಯೋತ್ಪಾದಕರ ಬಗ್ಗೆ ಮಾತನಾಡಿದ ಅಶೋಕ್ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗಲು ಕೇಂದ್ರ ಸರ್ಕಾರವೇ ದುರಾಡಳಿತವೇ ಕಾರಣ ಎಂದು ಹೇಳಿದರು.
|