ರಾಜ್ಯದಲ್ಲಿ ಉಗ್ರರ ಸಂಘಟನೆಯ ಪ್ರಮುಖ ರೂವಾರಿಯಾಗಿದ್ದ ಅದ್ನಾನ್ ಪತ್ತೆಗೆ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಂಧಿಸಲಾಗಿರುವ ಆಸಿಫ್, ಮಹಮದ್ ಗೌಸ್ ಹಾಗೂ ಅಸಾದುಲ್ಲಾರ ತೀವ್ರ ವಿಚಾರಣೆಯನ್ನು ಮುಂದುವರಿಸಿರುವ ಗುಪ್ತಚರ ಇಲಾಖೆಗೆ ಮಹತ್ವದ ಮಾಹಿತಿಗಳು ಲಭ್ಯವಾಗಿದೆ.
ಕಿಮ್ಸ್ ವಿದ್ಯಾರ್ಥಿ ಆಸಿಫ್ ವಿಚಾರಣೆ ಸಂದರ್ಭದಲ್ಲಿ ಈ ವಿಷಯವನ್ನು ಬಹಿರಂಗಗೊಂಡಿದ್ದು, ಅದ್ನಾನ್ ನಿರ್ದೇಶನದಂತೆ ಉಗ್ರರು ಕಾರ್ಯಾಚರಣೆಯಲ್ಲಿ ತೊಡಗುತ್ತಿದ್ದರು. ಆತನೇ ಇವರೆಲ್ಲರಿಗೂ ಗುರು ಆಗಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಉಗ್ರರು ತಮ್ಮ ಜೊತೆಗಿದ್ದವರ ಹೆಸರನ್ನು ಬಹಿರಂಗಗೊಳಿಸಿದ್ದು, ಇನ್ನೆಷ್ಟು ಮಂದಿ ಉಗ್ರರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಉಗ್ರರನ್ನು ಗುಪ್ತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಿ, ಇವರಿಂದ ಮುಖ್ಯ ದಾಖಲೆಗಳನ್ನು ಕಲೆ ಹಾಕಲಾಗಿದೆ ಎಂದು ಸಿಓಡಿ ಡಿಐಜಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರವು ವಿವರಗಳನ್ನು ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.
|