ಬೈಕ್ ಕಳ್ಳತನ ಆರೋಪದಲ್ಲಿ ಬಂಧಿತರಾಗಿರುವ ಉಗ್ರರು ತಾಲಿಬಾನ್ ಜತೆ ಸಂಪರ್ಕ ಹೊಂದಿದ್ದರು ಎಂಬ ಅಂಶ ವಿಚಾರಣೆ ವೇಳೆಗೆ ಗೊತ್ತಾಗಿದೆ.
ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಸಿಓಡಿ ಅಧಿಕಾರಿಗಳಿಗೆ ಸಾಕಷ್ಟು ಮಾಹಿತಿಗಳು ಲಭ್ಯವಾಗಿದ್ದು, ತಾಲಿಬಾನ್ ಜೊತೆಯಲ್ಲಿ ಸಂಪರ್ಕವಿರುವುದು ಸ್ಪಷ್ಟವಾಗಿದೆ ಎಂದು ತಿಳಿದು ಬಂದಿದೆ.
ವಿಚಾರಣೆಯಲ್ಲಿ ಬಹಿರಂಗಗೊಂಡ ಮಾಹಿತಿಯಂತೆ ಉಗ್ರರು ತಾಲಿಬಾನ್ ಸಂಘಟನೆಗಳೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದು, ಅಂತಾರಾಷ್ಟ್ರೀಯ ಉಗ್ರನಾದ ಒಸಾಮಾ ಬಿನ್ ಲಾಡೆನ್ ಜೊತೆ ಸಂಪರ್ಕವಿದೆಯೇ ಎಂಬ ಕುರಿತು ಸಿಓಡಿ ತನಿಖೆ ತೀವ್ರಗೊಳಿಸಿದೆ. ಈ ನಡುವೆ ಭಯೋತ್ಪಾದನೆ ಚಟುವಟಿಕೆಗಳ ಬಗ್ಗೆ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಅಸಾದುಲ್ಲಾ, ಮಹಮದ್ ಗೌಸ್ ಹಾಗೂ ಕಿಮ್ಸ್ ವಿದ್ಯಾರ್ಥಿ ಆಸಿಫ್‌ನನ್ನು ದಾವಣಗೆರೆಗೆ ಕರೆತರಲಾಗಿದೆ. ಅಲ್ಲದೆ, ಹುಬ್ಬಳ್ಳಿಯಲ್ಲೂ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ.
ಕಿಮ್ಸ್ ವಿದ್ಯಾರ್ಥಿ ಆಸಿಫ್‌ನನ್ನು ತನಿಖೆಗೊಳಪಡಿಸಿದ ಸಂದರ್ಭದಲ್ಲಿ ಬಹಿರಂಗಗೊಂಡ ಮಾಹಿತಿಯ ಬೆನ್ನಟ್ಟಿರುವ ಸೈಬರ್ ಕ್ರೈಂ ಪೊಲೀಸರು ಕಿಮ್ಸ್ ಕಾಲೇಜಿಗೆ ಭೇಟಿ ನೀಡಿದ್ದು, ತೀವ್ರ ಶೋಧನಾ ಕಾರ್ಯ ನಡೆಸಿದ್ದಾರೆ. ಆತ ನೆಲೆಸಿದ್ದ ರೂಮ್ ನಂ. 58ನ್ನು ಪರೀಶೀಲಿಸಿರುವ ಪೊಲೀಸರಿಗೆ ಮಹತ್ವದ ದಾಖಲೆಗಳು ದೊರೆತಿದೆ. ನೂರಾರು ಧಾರ್ಮಿಕ ಪುಸ್ತಕಗಳನ್ನು ವಶಕ್ಕೆ ತೆಗೆದುಕೊಳ್ಳಾಗಿದೆ.
|