ಭಯೋತ್ಪಾದನೆ ಬಗ್ಗೆ ಕೇಂದ್ರ ಸರಕಾರ ಮೃದು ನಿಲುವು ತಾಳಿದೆ ಎಂದು ಆಪಾದಿಸಿರುವ ಬಿಜೆಪಿ ಮುಖಂಡ ವೆಂಕಯ್ಯನಾಯ್ಡು ಇದರಿಂದಾಗಿ ಭಯೋತ್ಪಾದಕರ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯಕ್ಕೆ ಆಗಮಿಸಿರುವ ನಾಯ್ಡು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ರಾಜ್ಯದಲ್ಲಿನ ಭಯೋತ್ಪಾದಕ ಚಟುವಟಿಕೆಗಳ ಕುರಿತು ಶೀಘ್ರವೇ ತೀವ್ರ ರೀತಿಯ ತನಿಖೆ ಆರಂಭಿಸಬೇಕಿದೆ, ಈ ನಿಟ್ಟಿನಲ್ಲಿ ಸರಕಾರ ಶೀಘ್ರದಲ್ಲಿ ಪೋಟಾದಂತಹ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿದರು.
ಪೋಟಾ ಕಾಯಿದೆ ರದ್ದಾದ ನಂತರ ಅದಕ್ಕೆ ಪರ್ಯಾಯ ಕಾನೂನನ್ನು ತರುವಲ್ಲಿ ಕೇಂದ್ರ ವಿಫಲವಾಗಿದೆ. ಇದರಿಂದ ರಾಷ್ಟ್ರದಲ್ಲಿ ಭಯೋತ್ಪಾದಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಅವರು ಆರೋಪಿಸಿದರು. ಭೇಟಿಯ ಸಂದರ್ಭದಲ್ಲಿ ವೆಂಕಯ್ಯ ನಾಯ್ಡುರವರು ರಾಜ್ಯದ ಹಿರಿಯ ಮುಖಂಡರ ಜೊತೆಯಲ್ಲಿ ಮಾತುಕತೆ ನಡೆಸಿ, ರಾಜಕೀಯ ಪರಿಸ್ಥಿತಿಗಳ ಕುರಿತು ಚರ್ಚಿಸಿದರು.
|