ಪ್ರತಿಷ್ಠಿತ ಬಿಎಚ್ಇಎಲ್ ಉಪಪ್ರಧಾನ ವ್ಯವಸ್ಥಾಪಕ (ಡಿಜಿಎಂ) ವೀರೇಂದ್ರಕುಮಾರ್ ಹಾಗೂ ಅವರ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬ್ಯಾಟರಾಯನಪುರದ ಆವಲಹಳ್ಳಿಯಲ್ಲಿ ನಡೆದಿದೆ.
ಆವಲಹಳ್ಳಿಯ ಬಿಡಿಎ ಪಾರ್ಕ್ ಬಳಿ ವಾಸಿಸುತ್ತಿದ್ದ ದಂಪತಿಗಳು ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆ ತಾಳಲಾರದೆ ಈ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.
ಪೊಲೀಸರು ಕಾರಿನ ಬಳಿ ಬಂದು ತಪಾಸಣೆ ನಡೆಸಿದಾಗ ಹಿಂಬದಿ ಸೀಟಿನಲ್ಲಿ ಇಬ್ಬರು ಮೃತಪಟ್ಟಿದ್ದರು. ಇವರಿಗೆ ಇಬ್ಬರು ಪುತ್ರಿಯರಿದ್ದು, ಓರ್ವ ಪುತ್ರಿ ವಿವಾಹವಾಗಿ ನೆದರ್ಲ್ಯಾಂಡ್‌ನಲ್ಲಿ ನೆಲೆಸಿದ್ದಾರೆ.
ಪತ್ನಿಯೊಂದಿಗೆ ಚೀಟಿ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ವೀರೇಂದ್ರಕುಮಾರ್, ಅಲ್ಲಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಾಧ್ಯವಾಗದೆ ಕೊನೆಗೆ ಈ ನಿರ್ಧಾರಕ್ಕೆ ಬಂದಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
|