ನಗರದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಪಾಲರ ಕಾರ್ಯವೈಖರಿ, ಪೂರ್ಣ ಬಹುಮತದ ಸಂಪೂರ್ಣ ವಿಕಾಸ ಯೋಜನೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ.
ಈ ತಿಂಗಳ 27ರಿಂದ ರಾಜ್ಯವ್ಯಾಪ್ತಿ ಆಂದೋಲನ ನಡೆಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಯಶವಂತ ಸಿನ್ಹಾರವರು ಆಗಮಿಸಿರುವುದು ಸಭೆಗೆ ಮಹತ್ವ ಬಂದಿದೆ. ರಾಜ್ಯದಲ್ಲಿ ನಡೆಯಬೇಕಿರುವ ವಿಧಾನಸಭೆಗೆ ಪೂರ್ವ ಸಿದ್ಧತೆ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಗಳಿವೆ.
ರಾಜ್ಯದಲ್ಲಿ ಚುನಾಯಿತ ಸರಕಾರ ಇಲ್ಲದಿರುವುದರಿಂದ ರಾಜ್ಯಪಾಲರು ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆಂದು ಬಿಜೆಪಿ ಆರೋಪಿಸಿದ್ದು, ಕಳೆದ ಸಮ್ಮಿಶ್ರ ಸರಕಾರದಲ್ಲಿ ಮಂಡಿಸಲಾದ ಬಜೆಟ್ ಅಂಶಗಳನ್ನು ಜಾರಿಗೊಳಿಸುವಲ್ಲಿ ರಾಜ್ಯಪಾಲರು ವಿಫಲವಾಗಿದ್ದಾರೆಂದು ದೂರಿದ್ದಾರೆ. ಈ ಎಲ್ಲಾ ಅಂಶಗಳು ಸಭೆಯಲ್ಲಿ ಬರುವ ಸಾಧ್ಯತೆಗಳಿವೆ.
|