ಗುರುವಾರ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿರುವ ಕ್ಷೇತ್ರ ಪುನರ್ವಿಂಗಡಣೆಯನ್ನು ರಾಜ್ಯದ ಬಹುತೇಕ ಪಕ್ಷಗಳು ಸ್ವಾಗತಿಸಿದ್ದರೂ, ಇದರಿಂದ ಚುನಾವಣೆ ತಡವಾಗುತ್ತದೆಂಬ ಅಭಿಪ್ರಾಯ ಹೊರಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರ ಪುನರ್ವಿಂಗಡಣೆಯಿಂದ ತೊಂದರೆಯೇನೂ ಇಲ್ಲ. ಜಾರಿಯಾಗಲಿ ಆಗದೆ ಇರಲಿ ಜೆಡಿಎಸ್ ಪಕ್ಷ ಎಲ್ಲಾ ಕ್ಷೇತ್ರಗಳಲ್ಲೂ ಜಯಗಳಿಸಲು ಶ್ರಮಿಸುವ ಮೂಲಕ ಯಶಸ್ವಿಯಾಗುವ ವಿಶ್ವಾಸವಿದೆ ಎಂದು ಪ್ರತಿಕ್ರಿಯೆ ನೀಡಿದರು.
ಕೇಂದ್ರ ಸರಕಾರದ ಈ ನಿರ್ಧಾರಕ್ಕೆ ತಮ್ಮ ವಿರೋಧವಿಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡರವರು ಈ ಕಾರಣದಿಂದಾಗಿ ಚುನಾವಣೆ ಮುಂದೂಡುವುದು ಸರಿಯಲ್ಲ. ಮೇನಲ್ಲಿಯೇ ಚುನಾವಣೆ ನಡೆಸುಬೇಕೆಂದು ಚುನಾವಣಾ ಆಯೋಗಕ್ಕೆ ಸ್ಪಷ್ಟಪಡಿಸುತ್ತೇವೆ ಎಂದು ತಿಳಿಸಿದರು.
ಈ ನಿಯಮದಿಂದ ಹೊಸಬರಿಗೆ ಅವಕಾಶವಿದೆ ಹಾಗೂ ಹೆಚ್ಚು ಅನುಕೂಲವಾಗುವುದರಲ್ಲಿ ಸಂಶಯವಿಲ್ಲ. ಪರಿಶಿಷ್ಟ ಜಾತಿ ವರ್ಗಗಳ ಮೀಸಲು ಕ್ಷೇತ್ರಗಳ ಸಂಖ್ಯೆ ಹೆಚ್ಚಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
|