ಕಾಂಗ್ರೆಸನ್ನು ಸೋಲಿಸಲು ಯತ್ನಿಸುವವರು ಬಿಜೆಪಿಗೆ ಬನ್ನಿ ಎಂಬುದಾಗಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಬಹಿರಂಗ ಆಹ್ವಾನ ನೀಡಿದ್ದಾರೆ.
ಪಕ್ಷದ ಮುಖಂಡರ ವಿಶೇಷ ಸಭೆಯಲ್ಲಿ ಮಾತನಾಡುತ್ತಿದ್ದ ಅವರು ಜನತಂತ್ರದ ಬಗ್ಗೆ ಗೌರವ ಭಾವನೆ ಹೊಂದಿರುವ ಕಾಂಗ್ರೆಸ್, ಜೆಡಿಎಸ್ ಹಾಗೂ ಇತರ ಪಕ್ಷಗಳ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಬೇಕು ಎಂದು ನುಡಿದರು.
ರಾಜ್ಯದಾದ್ಯಂತ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಪಡಿಸಿದರು.
ರಾಜ್ಯದಲ್ಲಿ ಚುನಾವಣೆ ಮುಂದೂಡುವ ವಿಧೇಯಕವನ್ನು ತರಲು ಕೇಂದ್ರ ಹುನ್ನಾರ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಇದರ ವಿರುದ್ಧ ಪಕ್ಷ ತೀವ್ರ ರೀತಿಯ ಹೋರಾಟವನ್ನು ನಡೆಸಲಿದೆ ಎಂದು ಅವರು ತಿಳಿಸಿದರು.
|