ವೇಗ ನಿಯಂತ್ರಕವನ್ನು ಅಳವಡಿಸಲೇ ಬೇಕು ಎಂಬುದಾಗಿ ಖಡ್ಡಾಯಗೊಳಿಸಿರುವ ಹೈಕೋರ್ಟ್ ಆದೇಶವನ್ನು ಖಂಡಿಸಿ ಈ ತಿಂಗಳ 22ರ ಮಧ್ಯರಾತ್ರಿಯಿಂದ ಖಾಸಗಿ ಸಾರಿಗೆ ಸಂಘಟನೆಗಳು ಮುಷ್ಕರ ಹೂಡಲು ನಿರ್ಧರಿಸಿವೆ.
ಹೈಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ದಕ್ಷಿಣ ವಲಯದ ಸಾರಿಗೆ ಸಂಘಟನೆಗಳ ಮುಖಂಡರ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ಎಲ್ಲಾ ಖಾಸಗಿ ವಾಹನಗಳ ಸಂಚಾರವನ್ನು ನಿಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟರ ಒಕ್ಕೂಟದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ತಿಳಿಸಿದ್ದಾರೆ.
ವೇಗ ನಿಯಂತ್ರಕ ಅಳವಡಿಕೆಯಿಂದ ವಾಹನಗಳ ಮಾಲೀಕರಿಗೆ ತೊಂದರೆ ಉಂಟಾಗುತ್ತದೆ. ಹಾಗಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ಹೊರರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಎಲ್ಲಾ ಖಾಸಗಿ ವಾಹನಗಳನ್ನು ತಡೆಯಲಾಗುವುದು ಎಂದು ಅವರು ತಿಳಿಸಿದರು.
ಈ ಸಂಬಂಧ ಬಸ್, ಲಾರಿ, ಟ್ಯಾಂಕರ್, ಮ್ಯಾಕ್ಸಿಕ್ಯಾಬ್, ಟೂರಿಸ್ಟ್ ಟ್ಯಾಕ್ಸಿ ಸೇರಿದಂತೆ ಎಲ್ಲಾ ಬಗೆಯ ವಾಹನಗಳು ಸಂಚಾರವನ್ನು ನಿಲ್ಲಿಸಲಿದೆ ಎಂದು ಅವರು ತಿಳಿಸಿದರು.
|