ಕರ್ನಾಟಕ ಫೋರಂ ಫೊರ್ ಡಿಗ್ನಟಿ(ಕೆಡಿಎಫ್)ಯನ್ನು ಭಯೋತ್ಪಾದಕ ಸಂಘಟನೆ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಡಿ.ವಿ.ಸದಾನಂದ ಗೌಡ, ಇದನ್ನು ನಿಷೇಧಿಸಬೇಕೆಂದು ಆಗ್ರಹಿಸಿದ್ದಾರೆ.
ಮಂಗಳವಾರ ಕೊಡಿಗಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಸಿಮಿ ಸಂಘಟನೆಯಂತೆ ರೀತಿಯಲ್ಲಿ ಕೆಡಿಎಫ್ ತನ್ನ ಕಾರ್ಯ ಚಟುವಟಿಕೆಯನ್ನು ನಡೆಸುತ್ತಾ ಬಂದಿದೆ. ಆದ್ದರಿಂದ ಈ ಕೂಡಲೇ ಈ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರು.
ದೇಶದಲ್ಲಿ ಭಯೋತ್ಪಾದಕ ಕೃತ್ಯಗಳ ಸಂಖ್ಯೆ ದಿನೇ ದಿನೇ ವೃದ್ದಿಯಾಗುತ್ತಿದೆ. ಈ ನಿಟ್ಟಿನಲ್ಲಿ ಸರಕಾರ ಕೆಲವು ಕಠಿಣ ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕು ಹಾಗೂ ಕೆಲವು ಸೂಕ್ತ ಕಾನೂನುಗಳನ್ನು ಕೂಡಲೇ ಜಾರಿಗೆ ತರಬೇಕೆಂದು ಈ ಸಂದರ್ಭದಲ್ಲಿ ಅವರು ಹೇಳಿದರು.
|