ಬಂಟ್ವಾಳ ಸಮೀಪದ ಪಕ್ಕಿನಡ್ಕದಲ್ಲಿ ಆಟೋ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆ ಮಾಡಿದ ಘಟನೆ ಗುರುವಾರ ಸಂಭವಿಸಿದೆ. ಕೊಲೆಯಾದ ಚಾಲಕನನ್ನು ಬಾಡಿಗೆ ನೆಪದಲ್ಲಿ ಕರೆದೊಯ್ದು ದುಷ್ಕರ್ಮಿಗಳು ಈ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಕೊಲೆಗೀಡಾಗಿರುವ ಚಾಲಕ ಈ ಹಿಂದೆ ನಡೆದ ಕೋಮುಗಲಭೆಯಲ್ಲಿ ಭಾಗಿಯಾಗಿದ್ದನೆಂಬ ಸಂಶಯದಿಂದ ಈ ಕೊಲೆ ನಡೆದಿದೆ ಎಂದು ಪ್ರಾಥಮಿಕ ಹಂತದ ತನಿಖೆಯಲ್ಲಿ ಕಂಡು ಬಂದಿದೆ. ಸುಮಾರು ಐದು ಜನ ಇದ್ದ ಗುಂಪೊಂದು ಮೆಣಸಿನ ಪುಡಿಯನ್ನು ಆತನ ಮುಖಕ್ಕೆ ಎರಚಿ ಮರಕಾಸ್ತ್ರಗಳಿಂದ ಈ ಕೃತ್ಯ ಎಸಗಿದೆ.
ಈ ಕುರಿತು ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದು, ದುಷ್ಕರ್ಮಿಗಳ ಹುಡುಕಾಟದಲ್ಲಿದ್ದಾರೆ. ಕೊಲೆ ಪ್ರಕರಣದಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡು ಬಂದಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
|