ಕ್ಷೇತ್ರ ಪುನರ್‌ವಿಂಗಡಣೆ ಆಧಾರದಲ್ಲಿ ಚುನಾವಣೆ ನಡೆಯುತ್ತಿರುವುದು ಯುಪಿಎ ಸರಕಾರದ ಸಾಧನೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರ ಪುನರ್ ವಿಂಗಡಣೆಯ ಬಗ್ಗೆ ಟೀಕಿಸುವುದು ಸರಿಯಲ್ಲ. ಇದರಿಂದ ಮತದಾರರಿಗೆ ಸೂಕ್ತ ವ್ಯಕ್ತಿಯನ್ನು ಆರಿಸಲು ಸಹಕಾರಿಯಾಗುತ್ತದೆ. ಈ ನಿಯಮವನ್ನು ಜಾರಿಗೆ ತರುವಲ್ಲಿ ಕೇಂದ್ರ ಸರಕಾರ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚುನಾವಣೆ ಕುರಿತು ಮಾತನಾಡಿದ ಸಿದ್ದರಾಮಯ್ಯನವರು, ಇದುವರೆಗೆ ತಾವೇ ಶ್ರೇಷ್ಠರು ಎಂದು ಹೇಳಿಕೊಂಡು ಬಂದಿರುವ ಬಿಜೆಪಿ ತಮಗೆ ಪ್ರಮುಖ ಎದುರಾಳಿ. ಮುಂದಿನ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಮುಖಾಮುಖಿಯಾಗಲಿದೆ. ಉಳಿದ ಯಾವುದೇ ಪಕ್ಷಗಳು ರಾಜ್ಯದಲ್ಲಿ ಅಧಿಕಾರ ಸ್ಥಾಪಿಸುವುದು ಕನಸಿನ ಮಾತಷ್ಟೇ ಎಂದು ನುಡಿದರು.
|