ಬಹಳ ವಿವಾದದಿಂದ ಕೂಡಿದ್ದ ಶಿವಮೊಗ್ಗ ನಗರಸಭಾ ಚುನಾವಣೆಯಲ್ಲಿ ಕೊನೆಗೂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡನ್ನು ಬಿಜೆಪಿ ಗೆದ್ದುಕೊಂಡಿದೆ. ಅಧ್ಯಕ್ಷರಾಗಿ ಎಂ. ಶಂಕರ್ ಆಯ್ಕೆಯಾದರೆ ಉಪಾಧ್ಯಕ್ಷರಾಗಿ ಲಕ್ಷ್ಮಮ್ಮ ಸಣ್ಣಪ್ಪ ಆಯ್ಕೆಯಾಗಿದ್ದಾರೆ.
ಈ ಚುನಾವಣೆಗೂ ಮೊದಲೇ ಬಿಜೆಪಿಯಲ್ಲಿ ಅಭ್ಯರ್ಥಿ ಸ್ಥಾನದ ಕುರಿತು ಭಿನ್ನಮತ ಸ್ಫೋಟಗೊಂಡಿತ್ತು. ಎಂ. ಶಂಕರ್ ಮತ್ತು ಸುಭಾಷ್ ನಡುವೆ ಪೈಪೋಟಿ ಕಂಡುಬಂದಿತ್ತು. ಆ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗೀರೀಶ್ ಮಧ್ಯಪ್ರವೇಶಿಸಿ ಶಂಕರ್ ಅವರನ್ನು ಆಯ್ಕೆ ಮಾಡಿ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.
ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕನಾಗಿರುವ ಈಶ್ವರಪ್ಪನವರ ನಡುವಿನ ವೈಮನಸ್ಸು ಸಂಘರ್ಷಕ್ಕೆ ಕಾರಣ ಎಂದು ಕಾರ್ಯಕರ್ತರು ಭಾವಿಸಿದ್ದರಾದರೂ, ಸ್ಥಳಕ್ಕೆ ಆಗಮಿಸಿದ ಮಾಜಿ ಸಚಿವ ಶಂಕರಮೂರ್ತಿ ಭಿನ್ನಭಿಪ್ರಾಯವನ್ನು ಶಮನಗೊಳಿಸುವಲ್ಲಿ ಯಶಸ್ವಿಯಾದರು.
|