ಕನಕಪುರ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ವಿವಾದದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ.
ಚುನಾವಣೆ ನಡೆಯುವ ಪೂರ್ವದಲ್ಲಿ ಜೆಡಿಎಸ್ ಪಕ್ಷದ ಸದಸ್ಯರಾಗಿರುವ ಗಂಗಮ್ಮ ಹಾಗೂ ನಾಗರಾಜು ಅಲಿಯಾಸ ಚಿಟ್ನಿಯಪ್ಪ ಎಂಬುವವರನ್ನು ಅಪಹರಿಸಲಾಗಿದ್ದು, ಈ ಅಪಹರಣವನ್ನು ಸೋಲಿನ ಭೀತಿಯಿಂದ ಕಾಂಗ್ರೆಸ್ಸಿಗರೇ ಮಾಡಿದ್ದಾರೆಂದು ಜೆಡಿಎಸ್ ಮುಖಂಡರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು ಅಪಹರಣಕಾರರನ್ನು ಬಂಧಿಸಬೇಕು ಹಾಗೂ ಚುನಾವಣೆಯನ್ನು ಮುಂದೂಡುವಂತೆ ಜಿಲ್ಲಾಧಿಕಾರಿ ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಮಧ್ಯೆ ಅಪಹರಣದ ಸುದ್ದಿ ಹಬ್ಬುತ್ತಿರುವಂತೆ ನಗರದಲ್ಲಿ ಬಿಗುವಿನ ವಾತಾವರಣ ಕಂಡು ಬಂದಿದ್ದು, ಜೆಡಿಎಸ್ ಕಾರ್ಯಕರ್ತರು ಇದನ್ನು ವಿರೋಧಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿದ್ದು, ಇಂದು ಚುನಾವಣೆ ನಡೆಯುವ ಸಾಧ್ಯತೆಗಳು ಕಂಡು ಬಂದಿದೆ.
|