ಗಾರ್ಮೆಂಟ್ ಫ್ಯಾಕ್ಟರಿಯೊಂದಕ್ಕೆ ತಗುಲಿದ ಆಕಸ್ಮಿಕ ಬೆಂಕಿ ಅನಾಹುತದಿಂದಾಗಿ ಲಕ್ಷಾಂತರ ರೂ. ಹಾನಿಯಾದ ಘಟನೆ ಇಂದು (ಭಾನುವಾರ) ಬೆಳಿಗ್ಗೆ ಬೊಮ್ಮನಹಳ್ಳಿಯ ಸಮೀಪ ಸಂಭವಿಸಿದೆ.
ಬೆಳಿಗ್ಗೆ 10.30ರ ಸುಮಾರಿಗೆ ಅರವಿಂದ ಮಿಲ್ಸ್‌ಗೆ ಸಂಬಂಧಿಸಿದ ಗಾರ್ಮೆಂಟ್ ಫ್ಯಾಕ್ಟರಿಯೊಂದರಲ್ಲಿ ಈ ಘಟನೆ ಸಂಭವಿಸಿದ್ದು, ಸುಮಾರು 10ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಧೃಢಪಟ್ಟಿದೆ.
ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಅನಾಹುತ ಸಂಭವಿಸಿದೆ ಎಂದು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದು ಬಂದಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳ ತೀವ್ರ ಪ್ರಯತ್ನ ನಡೆಸಿ ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಈ ಘಟನೆಯಿಂದ ಯಾವುದೇ ಜನರಿಗೆ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಈ ಸಂಬಂಧ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಲ್ಪ ಮಟ್ಟಿನ ಗೊಂದಲಮಯ ವಾತಾವರಣ ಸೃಷ್ಟಿಯಾಗಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಅಲ್ಲದೆ, ಈ ಘಟನೆಯಿಂದ ನಗರದ ಹೊಸೂರು ರಸ್ತೆ ಸಂಪೂರ್ಣವಾಗಿ ಟ್ರಾಫಿಕ್ ಜಾಮ್ ಆಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
|