ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವೇಗ ನಿಯಂತ್ರಕ: ನಾಳೆ ಸು.ಕೋ ತೀರ್ಪು
ಖಾಸಗಿ ವಾಹನಗಳಲ್ಲಿ ವೇಗ ನಿಯಂತ್ರಕ ಕಡ್ಡಾಯದ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ಕೈಗೆತ್ತಿಕೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ, ಗೂಡ್ಸ್ ವಾಹನಗಳ ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲೀಕರು ದೆಹಲಿಯಲ್ಲಿ ಮೊಕ್ಕಂ ಹೂಡಿದ್ದಾರೆ.

ಹೈಕೋರ್ಟ್ ನೀಡಿರುವ ಆದೇಶದ ಕುರಿತು ಕೇಂದ್ರ ಭೂ ಸಾರಿಗೆ ಸಚಿವ ಟಿ.ಆರ್. ಬಾಲು ಹಾಗೂ ಕೇಂದ್ರ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜೆ.ಎನ್. ನೆಹರೂ ಅವರೊಂದಿಗೆ ಷಣ್ಮಗಪ್ಪ ಹಾಗೂ ನವೀನ್ ಶರ್ಮಾ ಈಗಾಗಲೇ ಮಾತುಕತೆ ನಡೆಸಿದ್ದು, ಯಾವುದೇ ಅಂತಿಮ ತೀರ್ಮಾನ ಹೊರಬಂದಿಲ್ಲ.

ಸುಪ್ರಿಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರಕಾರ ಪೂರಕ ಮಾಹಿತಿ ನೀಡಿ ನೆರವಾಗಬೇಕೆಂದು ಕೇಂದ್ರ ಸಚಿವರ ಜೊತೆಯಲ್ಲಿ ನಡೆದ ಮಾತುಕತೆಯಲ್ಲಿ ಮನವಿ ಮಾಡಲಾಗಿದೆ. ಇದಕ್ಕೆ ಸಚಿವರು ಸಕಾರಾತ್ಮಕ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದು ಷಣ್ಮುಗಪ್ಪ ತಿಳಿಸಿದ್ದಾರೆ.
ಮತ್ತಷ್ಟು
ವಿಮಾನ ನಿಲ್ದಾಣ ಉದ್ಘಾಟನೆಗೆ ತಡೆ :ಕರವೇ ಎಚ್ಚರಿಕೆ
ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ:10ಲಕ್ಷ ರೂ. ಹಾನಿ
ಮುಷ್ಕರ ನಿಲ್ಲಿಸದಿದ್ದಲ್ಲಿ ಕಠಿಣ ಕ್ರಮ
ಹಾಕ್ ಯುದ್ಧ ವಿಮಾನ ವಾಯುಸೇನೆಗೆ ಸೇರ್ಪಡೆ
ವೇಗ ನಿಯಂತ್ರಕ ಕಡ್ಡಾಯ: ಸರಕು ಮೇಲೆ ಪರಿಣಾಮ
ಪುರಸಭೆ ಚುನಾವಣೆ : ಜೆಡಿಎಸ್ ಸದಸ್ಯರ ಅಪಹರಣ