ಕೇಂದ್ರ ರೈಲ್ವೆ ಸಚಿವ ಲಾಲೂ ಪ್ರಸಾದ್ ಯಾದವ್ ಬಜೆಟ್‌ನಲ್ಲಿಯೂ ಕನ್ನಡಿಗರಿಗೆ ಅನ್ಯಾಯ ಮಾಡಿದ್ದಾರೆ ಎಂದು ರಾಜ್ಯ ರಾಜಕೀಯ ಪಕ್ಷಗಳು ತೀವ್ರವಾಗಿ ಖಂಡಿಸಿವೆ.
ಬಜೆಟ್‌ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಕ್ಕೆ ಲಾಲೂ ಅನ್ಯಾಯ ಮಾಡಿದ್ದಾರೆ. ರಾಜ್ಯದ ಮೂವರು ಕೇಂದ್ರ ಸಚಿವರು ರಾಜಿನಾಮೆ ನೀಡುವ ಮೂಲಕ ಇದನ್ನು ಪ್ರತಿಭಟಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸ್ವತಃ ಕಾಂಗ್ರೆಸ್ ನಾಯಕರೇ ರೈಲ್ವೆ ಬಜೆಟ್ ಕುರಿತು ಕಿಡಿಕಾರಿದ್ದು, ರೈಲ್ವೆ ಸಚಿವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬಾರಿ ಬಜೆಟ್ ವೈಯಕ್ತಿಕವಾಗಿ ಅಸಮಾಧಾನ ತಂದಿದೆ. ಇದರಲ್ಲಿ ರಾಜ್ಯಕ್ಕೆ ಆದ್ಯತೆ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ರೈಲ್ವೆ ಬಜೆಟ್ ಕುರಿತು ತಮ್ಮದೇ ದಾಟಿಯಲ್ಲಿ ಮಾತನಾಡಿದ ಮಾಜಿ ಶಾಸಕ ವಾಟಳ್ ನಾಗರಾಜ್, ರಾಜ್ಯದ ಬಹುದಿನಗಳ ಬೇಡಿಕೆಗಳನ್ನು ಪೂರೈಸುವಲ್ಲಿ ರೈಲ್ವೆ ಸಚಿವರು ವಿಫಲರಾಗಿದ್ದಾರೆ. ನಿರಂತರವಾಗಿ ನಡೆಯುತ್ತಿರುವ ಈ ಅನ್ಯಾಯದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ತಿಳಿಸಿದರು.
|