ಜ್ಞಾನಪೀಠ ಪ್ರಶಸ್ತಿಗಿಂತ ಒಂದು ರೂ. ಹೆಚ್ಚು ಮೊತ್ತ ಹೊಂದಿರುವ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ನಾಳೆ(ಶನಿವಾರ) ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ದೇ. ಜವರೇಗೌಡ ಅವರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಸ್ಥಾಪಿಸಿರುವ ಪ್ರಥಮ ಪ್ರಶಸ್ತಿ ಇದಾಗಿದ್ದು, ಎಡಿಎ ರಂಗಮಂದಿರದಲ್ಲಿ ಏರ್ಪಡಿಸಲಿರುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಕೇಂದ್ರ ಸಚಿವರಾದ ಎಂ.ವಿ.ರಾಜಶೇಖರ್ ಪ್ರದಾನ ಮಾಡಲಿದ್ದಾರೆ.
ಹಿರಿಯ ಕವಿ ಚೆನ್ನವೀರ ಕಣವಿ ಅಧ್ಯಕ್ಷತೆ ವಹಿಸಲಿರುವ ಈ ಸಮಾರಂಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಜೆ. ಲಕ್ಕಪ್ಪಗೌಡ ಪ್ರಶಸ್ತಿ ಪುರಸ್ಕ್ಕತರನ್ನು ಅಭಿನಂದಿಸಲಿದ್ದಾರೆ. ಇದೇ ಸಂದರ್ಭದಲಿ ಬೆಂ.ಮ.ಸಾ.ಸಂ. ಅರಳು ಸಾಹಿತ್ಯ ಪ್ರಶಸ್ತಿಯನ್ನು ಲೇಖಕಿ ಸಾ.ರಾ. ಅಬೂಬಕರ್ ಪ್ರದಾನ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
|