ಭಯೋತ್ಪಾದನೆ ಹೆಸರಿನಲ್ಲಿ ಮುಗ್ಧ ಹಾಗೂ ಅಮಾಯಕ ಜನರನ್ನು ಬಂಧಿಸಲಾಗುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಆರೋಪಿಸಿದ್ದಾರೆ.
ಭಯೋತ್ಪಾದಕರೆಂಬ ಅನುಮಾನಾಸ್ಪದವಾಗಿ ಈಗಾಗಲೇ ಸುಮಾರು 40 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಯೋತ್ಪಾದನೆ ಚಟುವಟಿಕೆಗಳಲ್ಲಿ ನಿರತರಾಗಿರುವವರನ್ನು ಬಂಧಿಸಿ ವಿಚಾರಣೆಗೊಳಪಡಿಸುವುದನ್ನು ಬಿಟ್ಟು, ಮುಗ್ಧ ಜನರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸದಾಗಿ ಕರ್ನಾಟಕ ಮುಸ್ಲಿಂ ಪರಿಷತ್ ಅಸ್ಥಿತ್ವಕ್ಕೆ ಬರಲಿದ್ದು, ಆ ಮೂಲಕ ಶಂಕಿತ ಭಯೋತ್ಪಾದಕರೆಂದು ಬಂಧನಕ್ಕೊಳದವರಿಗೆ ನೆರವು ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಇಬ್ರಾಹಿಂ, ಮಾಜಿ ಮುಖ್ಯಮಂತ್ರಿಗಳಿಬ್ಬರು ಕೆಲಸವಿಲ್ಲದೆ ಅಲೆದಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಇಂತಹ ಅಲೆಮಾರಿ ಸರ್ಕಾರ ಅಸ್ತಿತ್ವಕ್ಕೆ ಬರದಂತೆ ಜಾತ್ಯಾತೀತ ಪಕ್ಷಗಳಿಗೆ ಬೆಂಬಲ ನೀಡುವಂತೆ ಮತದಾರರಿಗೆ ಕರೆ ನೀಡಿದರು.
ಕಾಂಗ್ರೆಸ್ ಪಕ್ಷದೊಂದಿಗೆ ಸೇರಲು ತಮ್ಮ ಮೇಲೆ ಒತ್ತಡ ಹೇರುತ್ತಿದ್ದರೂ, ಈ ಬಗ್ಗೆ ಸಮಾನ ಮನಸ್ಕರೊಂದಿಗೆ ಚರ್ಚಿಸಿದ ಬಳಿಕವಷ್ಟೆ ನಿರ್ಧಾರ ಕೈಗೊಳ್ಳುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
|