ಉಗ್ರರಿಗೆ ಮಂಪರು ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಪಡೆದ ಮಾಹಿತಿಯಂತೆ ತನಿಖೆ ನಡೆಸಿದ ಸಿಓಡಿ ಪೊಲೀಸರು ಇನ್ನೊಬ್ಬ ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಾಮರಾಜಪೇಟೆಯಲ್ಲಿ ವಾಸಿಯಾಗಿದ್ದ ಮಹಮದ್ ಮಹಿ ಎಂಬಾತನನ್ನು ಸಿಓಡಿ ಪೊಲೀಸರು ವಶಪಡಿಸಿಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇವರೆಗೆ ಸುಮಾರು 8 ಜನ ಉಗ್ರಗಾಮಿಗಳನ್ನು ಸಿಓಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರಿಂದ ಸಾಕಷ್ಟು ಮಾಹಿತಿಗಳು ಲಭ್ಯವಾಗಿದೆ.
ಸಿಓಡಿ ಪೊಲೀಸರು ಈತನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮಾಧ್ಯಮದವರೊಂದಿಗೆ ಹಂಚಿಕೊಂಡಿಲ್ಲವಾದರೂ, ರಾಜ್ಯದಲ್ಲಿ ಅನೇಕ ಕಡೆಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದನೆಂದು ತಿಳಿದು ಬಂದಿದ್ದು, ಈತ ಮಹಮದ್ ಗೌಸ್ ಸೇರಿದಂತೆ ಬಂಧಿಸಲಾಗಿರುವ ಇತರೆ ಉಗ್ರರೊಂದಿಗೆ ನೇರ ಸಂಪರ್ಕ ಹೊಂದಿದ್ದ ಎಂದು ವಿಚಾರಣೆಯಿಂದ ತಿಳಿದು ಬಂದಿದೆ.
ಈ ಮಧ್ಯೆ ಹುಬ್ಬಳ್ಳಿಯ ಕಿಮ್ಸ್ ಸ್ಫೋಟಿಸುವುದಾಗಿ ಅನಾಮಿಕನೊಬ್ಬನಿಂದ ಬೆದರಿಕೆ ಪತ್ರವೊಂದು ಬಂದಿದ್ದು, ಕಿಮ್ಸ್‌ಗೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. ಈ ಬಗ್ಗೆ ಆತಂಕ ಪಡಬೇಕಾಗಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.
|