ರಾಷ್ಟ್ರೀಯ ತೋಟಗಾರಿಕಾ ಮಿಷನ್ ಅಡಿಯಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1,200ಕೋಟಿ ರೂ. ನೆರವು ಲಭ್ಯವಾಗಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ರಾಮಕೃಷ್ಣಪ್ಪ ತಿಳಿಸಿದ್ದಾರೆ.
ನಗರದಲ್ಲಿಂದು ನಡೆದ ವಿಚಾರಸಂಕಿರಣದಲ್ಲಿ ಮಾತನಾಡಿದ ಅವರು, ತೋಟಗಾರಿಕೆಯ ವಿವಿಧ ಬೇಡಿಕೆಗಳ ಅಭಿವೃದ್ದಿ ಯೋಜನೆಗಳಿಗೆ ಈ ಹಣವನ್ನು ಮೀಸಲಿಡಲಾಗಿದ್ದು, ಇದರಲ್ಲಿ ರೈತರಿಗೂ ಸಹಾಯಧನ ದೊರೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಸಭಾ ಪರಿಷತ್ ಸಭಾಪತಿ ಪ್ರೊ.ಬಿ.ಕೆ. ಚಂದ್ರಶೇಖರ್, ರಾಜ್ಯದಲ್ಲಿ ಶೇ. 70ರಷ್ಟು ಒಣಭೂಮಿ ಇದೆ. ಆದರೆ, ಕೃಷಿ ಇಲಾಖೆಗೆ ನೀಡಿರುವ ಕ್ರಮಗಳನ್ನು ತೋಟಗಾರಿಕೆ ಇಲಾಖೆಯ ಒಣಭೂಮಿ ಅಭಿವೃದ್ಧಿಗೆ ತೊಡಗಿಸಿಕೊಂಡಿಲ್ಲ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಒಣಭೂಮಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ತಿಳಿಸಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಬಿ.ಎನ್. ಧನಪಾಲ್ ಮಾತನಾಡಿ, ಮಳೆ ನೀರು ಸಂಗ್ರಹಕ್ಕೆ ಹೆಚ್ಚು ಒತ್ತು ನೀಡದೇ ಇರುವುದರಿಂದ ರಾಜ್ಯದಲ್ಲಿ ನಿರಂತರ ಬರ ಕಂಡು ಬಂದಿದೆ ಎಂದು ಅಭಿಪ್ರಾಯ ಪಟ್ಟರು.
|