ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪದೋಷಗಳು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ಹೇಳಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಾಕಷ್ಟು ಲೋಪದೋಷಗಳಿವೆ. ಅವುಗಳನ್ನು ಸರಿಪಡಿಸದೆ ತರಾತುರಿಯಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಚುನಾವಣಾ ಆಯೋಗದ ನಿರ್ಧಾರ ಸರಿಯಲ್ಲ ಎಂದು ಹೇಳಿರುವ ಅವರು, ಮತದಾರರ ಪಟ್ಟಿಯಲ್ಲಿ ಮತ್ತೆ ಲೋಪದೋಷಗಳು ಕಂಡು ಬಂದಲ್ಲಿ ಕಾನೂನಿನ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೃಷ್ಣ ರಾಜಕೀಯ ಪ್ರವೇಶವನ್ನು ಸ್ವಾಗತಿಸಿರುವ ಖರ್ಗೆ, ಕೃಷ್ಣ ಆಗಮನದಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಈ ಮಧ್ಯೆ ರಾಜ್ಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವಲ್ಲಿ ಎಸ್.ಎಂ.ಕೃಷ್ಣ ಪಾತ್ರ ಗಣನೀಯವಾಗಿದ್ದು, ಈ ನಿಟ್ಟಿನಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಬಹಳಷ್ಟು ಕಾರ್ಯಕ್ರಮಗಳನ್ನು ಕೈಗೊಂಡಿದ್ದರು. ಒಟ್ಟಾರೆಯಾಗಿ ಕೃಷ್ಣ ಆಗಮನ ನಿಜಕ್ಕೂ ತಮಗೆ ಸಂತಸ ತಂದಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
|