ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೃಷ್ಣಾಗಮನ: ಕಾಂಗ್ರೆಸಲ್ಲಿ ಹೊಸ ಹುಮ್ಮಸ್ಸು
PIB
ಎಸ್.ಎಂ.ಕೃಷ್ಣ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿರುವಂತೆ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಕಂಡುಬಂದಿದೆ. ಎಸ್.ಎಂ.ಕೃಷ್ಣ ರಾಜ್ಯ ರಾಜಕೀಯ ಪ್ರವೇಶಿಸುವುದರಿಂದ ಪ್ರದೇಶ ಕಾಂಗ್ರೆಸ್ ಪಕ್ಷ ಬಲವರ್ಧನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅಭಿಪ್ರಾಯಿಸಿದ್ದಾರೆ.

ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ದಿಗೆ ಪೂರಕವಾಗಿ ಅನೇಕ ಕಾರ್ಯಕ್ರಮಗಳು ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಕೃಷ್ಣ ಆಗಮನ ಸಕಾಲವಾಗಿದೆ ಎಂದು ತಿಳಿಸಿದ್ದಾರೆ.

ಕೃಷ್ಣ ರಾಜಕಾರಣಕ್ಕೆ ಮರಳಿದರೂ, ಕೆಪಿಸಿಸಿ ನಾಯಕತ್ವದ ಹೊಣೆಯನ್ನು ಮಲ್ಲಿಕಾರ್ಜುನ ಖರ್ಗೆಯವರೇ ಮುಂದುವರಿಸಲಿದ್ದು, ಅವರ ನಾಯಕತ್ವದಲ್ಲಿಯೇ ಮುಂದಿನ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಎದುರಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು
ಕೇಂದ್ರ ಬಜೆಟ್ ವಿರುದ್ಧ ಸಮರ: ಡಿವಿಎಸ್
ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರಿಗೆ ಗಾಯ
ಉಳ್ಳಾಲದಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ
ಪರಿಷ್ಕೃತ ಪಟ್ಟಿಯಲ್ಲಿ ಲೋಪವಿದ್ದಲ್ಲಿ ಕಾನೂನು ಕ್ರಮ: ಖರ್ಗೆ
ಬಜೆಟ್ ವಿರೋಧಿಸಿ ರೈತರ ಸಮಾವೇಶ
ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಲಿರುವ ಕೃಷ್ಣ