ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಸಿದ್ಧತೆ ಭರದಿಂದ ಸಾಗುತ್ತಿದ್ದು, ಮಾರ್ಚ್ 15ರೊಳಗೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳು ಮುಗಿಯುವ ನೀರೀಕ್ಷೆ ಕಂಡು ಬಂದಿದೆ.
ರಾಜ್ಯದ ಚುನಾವಣಾಧಿಕಾರಿಯಾಗಿದ್ದ ರಾಮಶೇಷನ್, ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ನೂತನ ಚುನಾವಣಾಧಿಕಾರಿಯಾಗಿ ವಿದ್ಯಾಶಂಕರ್ ನೇಮಕಗೊಳ್ಳುವ ಸಾಧ್ಯತೆಗಳಿವೆ. ಈ ಎಲ್ಲಾ ಬೆಳವಣಿಗೆಯಿಂದ ರಾಜ್ಯದಲ್ಲಿ ಶೀಘ್ರ ಚುನಾವಣೆಗೆ ವೇದಿಕೆ ಸಿದ್ಧವಾಗಿರುವುದು ಖಚಿತವಾಗಿದೆ.
ಈ ಮಧ್ಯೆ ಮಾರ್ಚ್ 10ಕ್ಕೆ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಲಿದ್ದು, ಮಾರ್ಚ್ 15ಕ್ಕೆ ಕ್ಷೇತ್ರ ಪುನರ್ವಿಂಗಡಣಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಅಲ್ಲದೆ, ಮಾರ್ಚ್ 20ಕ್ಕೆ ಪಾಲಿಕೆ ವ್ಯಾಪ್ತಿ ಮತದಾರರ ಪಟ್ಟಿ ಪ್ರಕಟಗೊಳ್ಳುವ ನೀರೀಕ್ಷೆ ಕಂಡು ಬಂದಿದೆ.
ಈ ಎಲ್ಲಾ ಬೆಳವಣಿಗೆಯ ನಡುವೆ ರಾಜ್ಯದ ರಾಜಕೀಯ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಸಜ್ಜುಗೊಳ್ಳುತ್ತಿದ್ದು, ಸಮಾವೇಶ, ಸಮಾರಂಭಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮತದಾರರ ಒಲೈಸುವ ಕೆಲಸಗಳು ಪ್ರಾರಂಭಗೊಂಡಿದೆ.
|