ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನಿಪ್ಪಾಣಿ ನಗರಸಭೆ ವಜಾಗೆ ಕರವೇ ಒತ್ತಾಯ
ನಿಪ್ಪಾಣಿ ನಗರಸಭೆ ಚುನಾವಣೆ ಮರಾಠಿಗರ ಪಾಲಾಗಿದ್ದನ್ನು ವಿರೋಧಿಸಿ ನಗರಸಭೆಯನ್ನು ವಜಾಗೊಳಿಸುವಂತೆ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇತ್ತೀಚೆಗೆ ನಡೆದ ನಿಪ್ಪಾಣಿ ನಗರಸಭೆಯನ್ನು ಮರಾಠಿಗರು ಗೆದ್ದುಕೊಂಡಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಮರಾಠಿ ಧ್ವಜವನ್ನು ಹಾರಿಸಿದ್ದು, ಕರವೇ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿತ್ತು. ಇದನ್ನು ವಿರೋಧಿಸಿ ಇಂದು ನಡೆಸಲಾದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ, ನಗರಸಭೆ ವಿರುದ್ಧ ಘೋಷಣೆಯನ್ನು ಕೂಗಿದರು.

ನಗರಸಭೆಗೆ ದಾಳಿ ನಡೆಸಿದ ಕರವೇ ಕಾರ್ಯಕರ್ತರು ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡು ಬಂದಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು 20 ಕರವೇ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ಸಂದರ್ಭದಲ್ಲಿ ಅಲ್ಲಿದ್ದ ಮಾಧ್ಯಮದವರ ಮೇಲೆ ಮರಾಠಿಗರು ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಕ್ಯಾಮೆರಾ ಜಖಂಗೊಂಡಿದ್ದು, ಸ್ಕೂಟರ್ ಬೆಂಕಿಗಾಹುತಿಯಾಗಿದೆ. ಅಲ್ಲದೆ, ಮೊಬೈಲ್ ಕಸಿದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪ್ರಕ್ಷುಬ್ದ ವಾತಾವರಣ ಕಂಡು ಬಂದಿದ್ದು, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತಷ್ಟು
ಮಾರ್ಚ್ 23ಕ್ಕೆ ರಾಜ್ಯಕ್ಕೆ ರಾಹುಲ್ ಗಾಂಧಿ
ರಾಜಭವನದೆದುರು ಕರವೇ ಪ್ರತಿಭಟನೆ
ಕೃಷ್ಣ ತಲುಪುವ ಮುನ್ನವೇ ಅಸಮಾಧಾನದ ಹೊಗೆ
ಎರಡೆರಡು ವಿಮಾನ ನಿಲ್ದಾಣಗಳು ಅಗತ್ಯವಿಲ್ಲ
ಶಂಕಿತ ಉಗ್ರರ ನ್ಯಾಯಾಂಗ ವಶ ಮಾ.14ಕ್ಕೆ ವಿಸ್ತರಣೆ
ಎಚ್ಎಎಲ್ ಟ್ಯಾಕ್ಸಿ ಸದಸ್ಯರ ಪ್ರತಿಭಟನೆ