ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಂತ್ರಸ್ತರಿಗೆ ಉದ್ಯೋಗಕ್ಕೆ ಕರವೇ ಒತ್ತಾಯ
ನೂತನವಾಗಿ ನಿರ್ಮಾಣವಾಗುತ್ತಿರುವ ಅಂತಾರಾಷ್ಟ್ತ್ರೀಯ ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ರೈತರ ಕುಟುಂಬದ ತಲಾ ಒಬ್ಬರಿಗೆ ಉದ್ಯೋಗ ನೀಡದಿದ್ದರೆ, ಉದ್ಘಾಟನೆಗೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ವಿಮಾನ ನಿಲ್ದಾಣದಿಂದ ಸುಮಾರು 3000 ರೈತರು ಭೂಮಿ ಕಳೆದುಕೊಂಡಿದ್ದಾರೆ. ಈ ಕುಟುಂಬದ ತಲಾ ಒಬ್ಬ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ಪ್ರಾಧಿಕಾರದ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಇದುವರೆಗೆ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರಿಂದ ರೈತರು ಬೀದಿ ಪಾಲಾಗುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.

ಉದ್ಯೋಗ ದೊರೆಯಲಿದೆ ಎಂಬ ಆಕಾಂಕ್ಷೆಯಿಂದ ರೈತರು ತಮ್ಮ ಜಮೀನನ್ನು ಬಿಟ್ಟುಕೊಟ್ಟಿದ್ದಾರೆ. ಇದರಿಂದ ಸುಮಾರು ನಾಲ್ಕು ಸಾವಿರ ಎಕರೆ ಕೃಷಿ ಭೂಮಿಯನ್ನು ಪ್ರಾಧಿಕಾರ ವಶಪಡಿಸಿಕೊಂಡಿದೆ. ಆದರೆ ರೈತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡದೆ ಮೋಸ ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ಭೂ ಸಂತ್ರಸ್ತರಿಗೆ ಉದ್ಯೋಗ ನೀಡದಿದ್ದರೆ, ಮಾರ್ಚ್ 28ರಂದು ನಡೆಯಲಿರುವ ಉದ್ಘಾಟನೆಗೆ ಅವಕಾಶ ಮಾಡಿಕೊಡುವುದಿಲ್ಲ ಹಾಗೂ ರೈತರಿಗೆ ಉದ್ಯೋಗ ದೊರೆಯುವರೆಗೂ ಕರವೇ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು
ಆಟೋ ಚಾಲಕನ ಮೇಲೆ ಪೊಲೀಸ್ ಹಲ್ಲೆ
ಪಕ್ಷದಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ: ಮೆರಾಜುದ್ದೀನ್
ಜಯಮಾಲಾ ಕೀರಿಟಕ್ಕೆ ಇನ್ನೊಂದು ಗರಿ
ಮೈಸೂರಿನಲ್ಲಿ ಕರವೇ ಪ್ರತಿಭಟನೆ
ತುಳುರಾಜ್ಯ: ಪುನರೂರು ಮಾತಿಗೆ ಕರವೇ ಆಕ್ಷೇಪ
ಕಾಂಗ್ರೆಸ್ ಪಾಲಾದ ಪ್ರಕಾಶ್