ಆಟಕ್ಕೆಂದು ತೆರಳಿದ ನಾಲ್ವರು ಬಾಲಕಿಯರು ನಾಪತ್ತೆಯಾಗಿದ್ದು, ಉದ್ಯಾನನಗರಿಯಲ್ಲಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಶೀತಲ್, ದೀಪಿಕಾ, ಅನುಷಾ ಹಾಗೂ ಸಿಂಧೂ ಕಣ್ಮರೆಯಾದ ವಿದ್ಯಾರ್ಥಿನಿಯರಾಗಿದ್ದು, ಕುಮಾರಸ್ವಾಮಿ ಲೇ ಓಟ್‌ನಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆ ತೊಡಗಿದ್ದಾರೆ. ಆದರೆ, ಇದುವರೆಗೆ ಯಾವುದೇ ಸುಳಿವು ದೊರೆತಿಲ್ಲ.
ಜೆ.ಪಿ.ನಗರದ ವಿವೇಕಾನಂದನಗರದ ಬಡವಾಣೆಯಲ್ಲಿ ವಾಸಿಸುತ್ತಿದ್ದ ಈ ನಾಲ್ವರು ಬಾಲಕಿಯರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಇವರಲ್ಲಿ ಮೂವರು ಇಂದಿರಾ ಪ್ರಿಯದರ್ಶಿನಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ ಎನ್ನಲಾಗಿದೆ. ಶನಿವಾರ ಸಂಜೆ ಆಟಕ್ಕೆ ತೆರಳಿದ ಮಕ್ಕಳು ಮರಳಿ ಬರದೇ ಇದ್ದಾಗ ಆತಂಕಗೊಂಡ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬೆಳವಣಿಗೆಯಿಂದ ಪೋಷಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಮಕ್ಕಳ ಕಣ್ಮರೆಗೆ ಇನ್ನು ಕಾರಣ ತಿಳಿದು ಬಂದಿಲ್ಲ.
|