ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿಪಿಎಂ ರಾಜ್ಯ ಕಾರ್ಯದರ್ಶಿ ಮನೆಯಲ್ಲಿ ದಾಂಧಲೆ
ಕಣ್ಣೂರಿನಲ್ಲಿ ಆರ್ಎಸ್ಎಸ್ ಮತ್ತು ಸಿಪಿಎಂ ನಡುವೆ ನಡೆದ ಘಟನೆ ರಾಜ್ಯಕ್ಕೂ ವ್ಯಾಪಿಸಿದೆ. ರಾಜ್ಯದ ಸಿಪಿಎಂ ರಾಜ್ಯ ಕಾರ್ಯದರ್ಶಿ ನಾಯರ್ ಮನೆಗೆ ದುಷ್ಕರ್ಮಿಗಳು ನುಗ್ಗಿ ದಾಂಧಲೆ ನಡೆಸಿದ್ದಾರೆ.

ಈ ಘಟನೆಯನ್ನು ಖಂಡಿಸಿರುವ ರಾಜ್ಯ ಸಿಪಿಎಂ ಸೋಮವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದು, ಇದು ಆರ್ಎಸ್ಎಸ್ ಹಾಗೂ ಬಿಜೆಪಿಯ ಇತರ ಸಂಘ ಸಂಸ್ಥೆಗಳ ಕೃತ್ಯವಾಗಿದೆ ಎಂದು ಅದು ಆರೋಪಿಸಿದೆ.

ನಿನ್ನೆ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ನಾಯರ್ ಅವರ ಪತ್ನಿ ಮೇಲೆ ಹಲ್ಲೆ ನಡೆಸಿ, ಮನೆಯಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಬಳಿಕ ನಾಯರ್ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು, ಅಲ್ಲಿದ್ದ ವಸ್ತುಗಳನ್ನೆಲ್ಲಾ ಧ್ವಂಸ ಮಾಡಿ, ನಾಯರ್ ಅವರ ಲಾಪ್ ಟಾಪ್ ತೆಗೆದುಕೊಂಡು ಪರಾರಿಯಾಗಿದ್ದಾರೆ.

ಈ ಸಂದರ್ಭದಲ್ಲಿ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದರಾದರೂ ಅವರು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ದುಷ್ಕರ್ಮಿಗಳು ಪರಾರಿಯಾಗಿದ್ದರು. ಈ ಕೃತ್ಯವನ್ನು ಸಿಪಿಎಂ ಖಂಡಿಸಿದ್ದು, ಈ ಬಗ್ಗೆ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದೆ.
ಮತ್ತಷ್ಟು
ಆಟಕ್ಕೆ ತೆರಳಿದ 4 ಬಾಲಕಿಯರು ನಾಪತ್ತೆ
ಸಂತ್ರಸ್ತರಿಗೆ ಉದ್ಯೋಗಕ್ಕೆ ಕರವೇ ಒತ್ತಾಯ
ಆಟೋ ಚಾಲಕನ ಮೇಲೆ ಪೊಲೀಸ್ ಹಲ್ಲೆ
ಪಕ್ಷದಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ: ಮೆರಾಜುದ್ದೀನ್
ಜಯಮಾಲಾ ಕೀರಿಟಕ್ಕೆ ಇನ್ನೊಂದು ಗರಿ
ಮೈಸೂರಿನಲ್ಲಿ ಕರವೇ ಪ್ರತಿಭಟನೆ