ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಜೆಡಿಎಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಇಂದಿನಿಂದ ರಾಜ್ಯಾದ್ಯಂತ ಜೈತ್ರಯಾತ್ರೆ ಪ್ರಾರಂಭಿಸಿದ್ದು, ಈ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದೆ.
ಇಂದು ಮುಂಜಾನೆ ನಗರದ ಗಾಳಿ ಆಂಜನೇಯ ದೇವಸ್ಥಾನದಲ್ಲಿ ಪೂಜೆ ನೇರೆವೇರಿಸಿ, ಜೈತ್ರಯಾತ್ರೆಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಚಾಲನೆ ನೀಡಿದರು. ರಾಜ್ಯಾದ್ಯಂತ ಕೈಗೊಳ್ಳುವ ಈ ಪ್ರವಾಸದಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಜನತೆಗೆ ತಿಳಿಯಪಡಿಸಸಲಾಗುತ್ತದೆ ಎಂದು ಜೆಡಿಎಸ್ ತಿಳಿಸಿದೆ.
ಈ ಯಾತ್ರೆ ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ತುಮಕೂರು, ಮಂಗಳೂರು, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಸಂಚರಿಸಲಿದ್ದು, ಈ ಮೂಲಕ ಮತದಾರರನ್ನು ತನ್ನಡೆಗೆ ಸೆಳೆಯುವ ಪ್ರಯತ್ನಕ್ಕೆ ಜೆಡಿಎಸ್ ಮುಂದಾಗಿದೆ.
ಶಸ್ತ್ರ ಚಿಕಿತ್ಸೆಯಿಂದ ಸಂಪೂರ್ಣ ಚೇತರಿಸಿಕೊಂಡಿರುವ ಕುಮಾರಸ್ವಾಮಿ, ಈ ಪ್ರವಾಸದ ಮೂಲಕ ರಾಜ್ಯದಲ್ಲಿ ಜೆಡಿಎಸ್ ಶಕ್ತಿ ಕುಂದಿದೆ ಎಂಬ ಅನುಮಾನಗಳಿಗೆ ತಕ್ಕುದಾದ ಪ್ರತ್ಯುತ್ತರ ನೀಡಲು ಮುಂದಾಗಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಚುನಾವಣೆಗೆ ಜೆಡಿಎಸ್ ರಣಕಹಳೆ ಹೊರಡಿಸಿದೆ.
|