ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರುವ ಇಂಗಿತ
ಉಡುಪಿ ಜಿಲ್ಲೆಯ ಪ್ರಭಾವಿ ನಾಯಕರಾಗಿರುವ ಮಾಜಿ ಶಾಸಕ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರುವ ಚಿಂತನೆ ನಡೆಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ಮತ್ತೊಂದು ಕೈ ಬಂದಂತಾಗಿದೆ.

ಜನತಾ ಪರಿವಾರದಿಂದ ಹೊರನಡೆದಿದ್ದ ಜಯಪ್ರಕಾಶ್, ಪಕ್ಷೇತರ ಅಭ್ಯರ್ಥಿಯಾಗಿ ಬ್ರಹ್ಮಾವರ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ ಪಕ್ಷೇತರನಾಗಿ ಹೋರಾಟ ನಡೆಸುವುದು ಅಸಾಧ್ಯವೆಂಬ ಹಿನ್ನೆಲೆಯಲ್ಲಿ ರಾಜ್ಯದ ದೊಡ್ಡ ಪಕ್ಷಗಳಿಗೆ ಸೇರುವ ಕುರಿತು ಚಿಂತನೆ ನಡೆಸುತ್ತಿದ್ದ ಹೆಗ್ಡೆ, ಕೊನೆಗೆ ತಮ್ಮ ನಿಲುವುಗಳಿಗೆ ಸ್ಪಂದಿಸುವ ಕಾಂಗ್ರೆಸ್ ಪಕ್ಷವೇ ಸೂಕ್ತವೆಂದು ನಿರ್ಧರಿಸಿದರು.

ಇದೇ ಸಮಯದಲ್ಲಿ ವಿಧಾನಸಭಾ ಚುನಾವಣೆ ಮೇ ತಿಂಗಳಲ್ಲಿ ಎಂಬ ಅಂಶ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರುವ ಕುರಿತು ಒಲವು ವ್ಯಕ್ತಪಡಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ಇನ್ನೆರೆಡು ದಿನಗಳಲ್ಲಿ ತಮ್ಮ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಕ್ಷೇತ್ರ ಪುನರ್ವಿಂಗಡಣೆ ಆಧಾರದಲ್ಲಿ ಚುನಾವಣೆ ನಡೆಯಲಿರುವುದರಿಂದ ಜಯಪ್ರಕಾಶ್ ಈ ಹಿಂದೆ ಸ್ಪರ್ಧಿಸಿದ್ದ ಬ್ರಹ್ಮಾವರ ಕ್ಷೇತ್ರ ಉಡುಪಿ ಹಾಗೂ ಕುಂದಾಪುರಕ್ಕೆ ಹಂಚಿ ಹೋಗಿರುವುದರಿಂದ ಇವೆರೆಡು ಕ್ಷೇತ್ರಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ಈ ಮಧ್ಯೆ, ಉಡುಪಿಯಲ್ಲಿ ಮನೋರಮಾ ಮಧ್ವರಾಜ್‌ರಂತಹ ಪ್ರಭಾವಿ ನಾಯಕರಿರುವುದರಿಂದ ಕುಂದಾಪುರ ಕ್ಷೇತ್ರವನ್ನು ಆಯ್ಕೆ ಮಾಡಲಿದ್ದಾರೆ ಎಂದು ಜಯಪ್ರಕಾಶ್ ಹೆಗ್ಡೆ ನಿಕಟವರ್ತಿಗಳು ತಿಳಿಸಿದ್ದಾರೆ.
ಮತ್ತಷ್ಟು
ಅಡ್ಡಾದಿಡ್ಡಿ ಬಸ್ ಓಡಿಸಿದ ಕ್ಲೀನರ್: ಮಹಿಳೆ ಸಾವು
ಚುನಾವಣೆಗೆ ಬಿಜೆಪಿ ರೆಡಿ: 17ರಂದು ರಾಜ್ಯಕ್ಕೆ ಮೋದಿ
ಸ್ಪೀಡ್ ಗವರ್ನರ್‌ಗೆ ಸುಪ್ರೀಂ ಕೋರ್ಟ್ ಬ್ರೇಕ್
ರಾಜ್ಯ ಬಜೆಟ್‌ನಲ್ಲಿ ಚುನಾವಣಾ ಮಸಾಲೆ ಇರಲಿದೆಯೇ?
ಜೆಡಿಎಸ್ ಚುನಾವಣಾ ರಣಕಹಳೆ: ಜೈತ್ರಯಾತ್ರೆಗೆ ಚಾಲನೆ
ಸಿಪಿಎಂ ರಾಜ್ಯ ಕಾರ್ಯದರ್ಶಿ ಮನೆಯಲ್ಲಿ ದಾಂಧಲೆ