ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಚ್ಎಎಲ್ ನಿಲ್ದಾಣ ಮುಂದುವರಿಕೆ ಒತ್ತಾಯಿಸಿ ಮುಷ್ಕರ
ಎಚ್ಎಎಲ್ ವಿಮಾನ ನಿಲ್ದಾಣವನ್ನು ಮುಚ್ಚುವ ನಿರ್ಧಾರವನ್ನು ಖಂಡಿಸಿ ಇಂದು ಮಧ್ಯರಾತ್ರಿಯಿಂದ ಮುಷ್ಕರ ನಡೆಸಲು ವಿಮಾನ ನಿಲ್ದಾಣ ಪ್ರಾಧಿಕಾರದ ಕಾರ್ಮಿಕರ ಒಕ್ಕೂಟ ನಿರ್ಧರಿಸಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾರಂಭವಾದ ಬಳಿಕ ಎಚ್ಎಲ್ ವಿಮಾನ ನಿಲ್ದಾಣವನ್ನು ಮುಚ್ಚುವುದರಿಂದ ಸಾರ್ವಜನಿಕರಿಗೆ ಲಾಭಕ್ಕಿಂತ ಹೆಚ್ಚಾಗಿ ನಷ್ಟವೆ ಆಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನಿಸಿ, ಎಚ್ಎಎಲ್ ವಿಮಾನ ನಿಲ್ದಾಣವನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಒಕ್ಕೂಟ ಆಗ್ರಹಿಸಿದೆ.

ಫೆಬ್ರವರಿ 26ರಂದೇ ಮುಷ್ಕರ ನಡೆಸಲೂ ತೀರ್ಮಾನಿಸಿದ್ದರೂ, ನಾಗರಿಕ ವಿಮಾನಯಾನ ಸಚಿವಾಲಯ ತಮ್ಮ ಬೇಡಿಕೆಗೆ ಸ್ಪಂದಿಸಬಹುದೆಂಬ ಕಾರಣದಿಂದ ಮುಷ್ಕರವನ್ನು ಮುಂದೂಡಿತ್ತು. ಆದರೆ ಈ ಬಗ್ಗೆ ಸಚಿವಾಲಯ ಯಾವುದೇ ತೀರ್ಮಾನವನ್ನು ಕೈಗೊಳ್ಳದಿದ್ದುದರಿಂದ ಇಂದು ಮುಷ್ಕರ ನಡೆಸಲು ತೀರ್ಮಾನಿಸಿದೆ. ಸುಮಾರು 18 ಸಾವಿರ ಕಾರ್ಮಿಕರು ಈ ಮುಷ್ಕರದಲ್ಲಿ ಪಾಲ್ಗೊಳ್ಳುವ ನೀರೀಕ್ಷೆ ಇದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ವಿಮಾನ ಹಾರಾಟದಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆಗಳಿದ್ದು, ಪರಿಣಾಮ ಪ್ರಯಾಣಿಕರಿಗೆ ತೀವ್ರ ಆಡಚಣೆಯಾಗುವ ಸಾಧ್ಯತೆಗಳಿವೆ. ಒಟ್ಟಾರೆಯಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆಗೂ ಮುನ್ನ ಹಲವು ಸಮಸ್ಯೆಗಳಿಗೆ ಉತ್ತರ ಹುಡುಕಬೇಕಿದೆ. ಮುಖ್ಯವಾಗಿ ವಿಮಾನ ನಿಲ್ದಾಣದ ಕೆಲಸಗಳು ಇನ್ನೂ ಪೂರ್ಣಗೊಳ್ಳಬೇಕಿದ್ದು, ಉದ್ಘಾಟನೆ ವಿಳಂಬವಾಗುವ ಸಾಧ್ಯತೆಗಳು ಒಂದೆಡೆಯಾದರೆ, ಇನ್ನೊಂದೆಡೆ ಎಚ್ಎಎಲ್ ಮುಚ್ಚಬಾರದೆಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಮತ್ತಷ್ಟು
ಚೋಮನದುಡಿ ಕೃತಿಸ್ವಾಮ್ಯ ಉಲ್ಲಂಘನೆ: ಮಾಲಿನಿ ಮಲ್ಯ ರಿಟ್
ವಿಮಾನ ನಿಲ್ದಾಣ ಉದ್ಘಾಟನೆ ಮುಂದಕ್ಕೆ
ಅಭಿವೃದ್ಧಿ ಪರ ಬಜೆಟ್: ಕಾಂಗ್ರೆಸ್; ನೀರಸ: ಬಿಜೆಪಿ, ಜೆಡಿಎಸ್
ನಂಜುಂಡಪ್ಪ ವರದಿಗೆ ಒತ್ತು ನೀಡಿದ ಚಿದು ಬಜೆಟ್
ಎಚ್ಎಎಲ್ ವಿಮಾನ ನಿಲ್ದಾಣ: ಸರಕಾರಕ್ಕೆ ನೋಟಿಸ್
ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರುವ ಇಂಗಿತ