ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಏ.8ರಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷವು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಏಪ್ರಿಲ್ 8 ಅಥವಾ 9ರಂದು ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಾಟೀಲ್ ತಿಳಿಸಿದ್ದಾರೆ.

ಚುನಾವಣೆಯಲ್ಲಿ ಯಾವ ಪಕ್ಷಗಳೊಂದಿಗೂ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದ ಅವರು, ಈ ಹಿನ್ನೆಲೆಯಲ್ಲಿ ಎಲ್ಲಾ 224ಕ್ಷೇತ್ರಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಈ ಮೂಲಕ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುವಷ್ಟು ಸ್ಪಷ್ಟ ಬಹುಮತ ಗಳಿಸಲಿದೆ ಎಂದು ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಅವರು ತಿಳಿಸಿದರು.

ಇದಕ್ಕೂ ಮೊದಲು ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಲು ಮುಂದಾಗಿರುವುದಾಗಿ ತಿಳಿಸಿದ್ದ ಮೆರಾಜುದ್ದೀನ್ ಪಾಟೀಲ್ ಈಗ ಮೈತ್ರಿ ವಿಷಯವನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿದ ಅವರು, ಎಸ್ಪಿಯೊಂದಿಗೆ ಮೈತ್ರಿ ಕುರಿತು ಒಂದು ಸುತ್ತಿನ ಮಾತುಕತೆ ನಡೆಸಲಾಗಿತ್ತು. ಆದರೆ, ಮತ್ತೊಂದು ಸುತ್ತಿನ ಮಾತುಕತೆಗೆ ಆ ಪಕ್ಷದ ನಾಯಕರಿಂದ ಪ್ರತಿಕ್ರಿಯೆ ಬಂದಿಲ್ಲವಾದ್ದರಿಂದ ಹೊಂದಾಣಿಕೆ ವಿಷಯವನ್ನು ಕೈಬಿಡಬೇಕಾಯಿತು ಎಂದು ತಿಳಿಸಿದರು.

ಚುನಾವಣೆಗಾಗಿ ತಮ್ಮ ಪಕ್ಷದ ವತಿಯಿಂದ ಸ್ಪರ್ಧಿಸಲು ಈಗಾಗಲೇ 1700 ಅಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅವರು, ಪಕ್ಷದ ನಿಯಾಮವಳಿಗಳಿಗೆ ಬದ್ಧನಾಗಿ ತಾನು ಕೂಡ 5 ಸಾವಿರ ಠೇವಣಿಯೊಂದಿಗೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.
ಮತ್ತಷ್ಟು
"ಹೊಗೇನಕಲ್ ಯೋಜನೆಗೆ ತಡೆಯಾಜ್ಞೆ ಇಲ್ಲ'
ಉದ್ಯೋಗದ ಅಮಿಷ: ಒಬ್ಬನ ಬಂಧನ
ವಿಧಾನಸಭೆ ಚುನಾವಣೆ ಘೋಷಣೆ
ಕಾಂಗ್ರೆಸ್‌ಗೆ ಕೈ ಕೊಟ್ಟ ಮಹದೇವ್
ಚಾಲಕನ ಅಜಾಗರೂಕತೆ:ಬಿಎಂಟಿಸಿ ಬಸ್ಸಿಗೆ ಮಹಿಳೆ ಬಲಿ
ಕರುಣಾ ಪುತ್ರಿಗೆ ವಿಶೇಷ ಭದ್ರತೆ