ರಾಜ್ಯದಲ್ಲಿ ಮುಕ್ತ ಹಾಗೂ ಶಾಂತಿಯುತ ಚುನಾವಣೆಗಾಗಿ ಸಕಲ ಸಿದ್ಧತೆಗಳ ಕುರಿತು ಪರೀಶೀಲನೆ ನಡೆಸಲು ನಾಳೆ(ಶುಕ್ರವಾರ) ಕೇಂದ್ರ ಚುನಾವಣಾ ಆಯೋಗ ರಾಜ್ಯಕ್ಕೆ ಆಗಮಿಸಲಿವೆ.
ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ಎನ್. ಗೋಪಾಲಸ್ವಾಮಿ, ಆಯುಕ್ತರಾದ ನವೀನ್ ಚಾವ್ಲಾ ಹಾಗೂ ಖುರೇಷಿ ಅವರುಗಳನ್ನೊಳಗೊಂಡ ಆಯೋಗವು ರಾಜ್ಯದ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚರ್ಚೆ ನಡೆಸಲಿದೆ.
ಆಯೋಗದ ಎರಡು ದಿನಗಳ ರಾಜ್ಯ ಭೇಟಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಐಪಿಜಿಗಳು, ಚುನಾವಣಾ ವೀಕ್ಷಕರು, ಪ್ರಾದೇಶಿಕ ಆಯುಕ್ತರ ಸಭೆ ಆಯೋಜಿಸಿದೆ. ಸಭೆಯಲ್ಲಿ ಜಿಲ್ಲೆಗಳಲ್ಲಿ ಕೈಗೊಳ್ಳಬೇಕಾಗಿರುವ ಸಿದ್ಧತೆಗಳು ಕುರಿತು ಸಲಹೆ ಸೂಚನೆಗಳನ್ನು ನೀಡಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ಈ ಮಧ್ಯೆ ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೆ ಕೈಬಿಡಬಾರದೆಂಬ ಉದ್ದೇಶದಿಂದ ವಿಶೇಷ ಅಭಿಯಾನವನ್ನು ಕೈಗೊಂಡಿದ್ದು, ಮತದಾರರ ಪಟ್ಟಿಯ ಕುರಿತು ರಾಜಕೀಯ ಪಕ್ಷಗಳ ಜೊತೆ ಆಯೋಗವು ಚರ್ಚಿಸಲಿದೆ ಎಂದು ತಿಳಿದು ಬಂದಿದೆ.
|