ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣೆ ಪ್ರಚಾರಕ್ಕೆ ಸೋನಿಯಾ, ಪ್ರಧಾನಿ
ಯುಗಾದಿ ಹಬ್ಬದ ಬಳಿಕ ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಆರಂಭಿಸಲು ಸರ್ವಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯದಲ್ಲಿ ಅಧಿಕಾರವನ್ನು ಮರು ಸ್ಥಾಪಿಸಲು ಅಗತ್ಯವಿರುವ ಎಲ್ಲಾ ಕಾರ್ಯತಂತ್ರಗಳನ್ನು ಕಾಂಗ್ರೆಸ್ ರೂಪಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಗೃಹ ಸಚಿವ ಶಿವರಾಜ್ ಪಾಟೀಲ್ ಸೇರಿದಂತೆ ಎಲ್ಲಾ ಕಾಂಗ್ರೆಸ್‌ನ ಅತಿರಥ ಮಹಾರಥರನ್ನು ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳಲು ಕೆಪಿಸಿಸಿ ನಿರ್ಧರಿಸಿದೆ. ಇದಕ್ಕೆ ಕಾರಣ ಇಲ್ಲದಿಲ್ಲ, ಡಿಸ್ಕವರಿ ಇಂಡಿಯಾ ಪ್ರಯುಕ್ತ ರಾಜ್ಯಕ್ಕೆ ಆಗಮಿಸಿರುವ ರಾಹುಲ್ ಗಾಂಧಿ ಪ್ರಭಾವ ರಾಜ್ಯದೆಲ್ಲೆಡೆ ಹಬ್ಬಿತ್ತು. ಅದನ್ನು ಮತ್ತೆ ಮುಂದುವರೆಸುವುದಕ್ಕಾಗಿ ಕೆಪಿಸಿಸಿ ಈ ತಂತ್ರವನ್ನು ಬಳಸಿಕೊಂಡಿದೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಪ್ರದೇಶ ಚುನಾವಣಾ ಸಮಿತಿ ಅಧ್ಯಕ್ಷರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ನಡೆದ ಪ್ರಚಾರ ಸಮಿತಿಯ ಮೊದಲ ಸಭೆಯಲ್ಲಿ ಈ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಚಾರ ತಂಡಗಳು ಒಂದು ಕ್ಷೇತ್ರದಿಂದ ಕ್ಷೇತ್ರಕ್ಕೆ ಹೋಗುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮೂಲ ತಂತ್ರವಾದ ರೋಡ್‌ಶೋ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಿದೆ. ಅಲ್ಲದೆ, ಪಕ್ಷದ ಸಾಧನೆ ಹಾಗೂ ಕಾರ್ಯಕ್ರಮಗಳ ಪ್ರಚಾರ ಹಾಗೂ ಪ್ರಸಾರಕ್ಕಾಗಿ ಆಡಿಯೋ-ವಿಡಿಯೋ ವಾಹನಗಳು ಪ್ರತಿ ಜಿಲ್ಲೆಯಲ್ಲಿಯೂ ಸಂಚರಿಸಲಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಒಟ್ಟಿನಲ್ಲಿ ಚುನಾವಣೆ ಎದುರಿಸಲು ಹಿಂದೇಟು ಹಾಕಿದ್ದ ಕಾಂಗ್ರೆಸ್, ಇದೀಗ ಸರ್ವ ವಿಧದಲ್ಲೂ ಸಿದ್ಧ ಎಂಬುದನ್ನು ತೋರಿಸಲು ತಯಾರಿ ನಡೆಸುತ್ತಿದೆ.
ಮತ್ತಷ್ಟು
ಚುನಾವಣೆ ಸಿದ್ಧತೆ: ಪರಿಶೀಲನೆಗೆ ಆಯೋಗ ಭೇಟಿ
ಅಬ್ಬರದ ಪ್ರಚಾರಕ್ಕೆ ಆಯೋಗದ ಕಡಿವಾಣ
ಏ.8ರಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
"ಹೊಗೇನಕಲ್ ಯೋಜನೆಗೆ ತಡೆಯಾಜ್ಞೆ ಇಲ್ಲ'
ಉದ್ಯೋಗದ ಅಮಿಷ: ಒಬ್ಬನ ಬಂಧನ
ವಿಧಾನಸಭೆ ಚುನಾವಣೆ ಘೋಷಣೆ