ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗಾಗಿ ಇಂದು (ಗುರುವಾರ) ಭಾರತೀಯ ಜನತಾ ಪಕ್ಷ ನಗರದ ಹೊರವಲಯದಲ್ಲಿ ಸಮಾಲೋಚನೆ ನಡೆಸುತ್ತಿದೆ.
ಇಂದು ಸಂಜೆಯವರೆಗೆ ನಡೆಯಲಿರುವ ಸಭೆಯಲ್ಲಿ ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸಲಿರುವ 150 ಆಕಾಂಕ್ಷಿಗಳ ಪಟ್ಟಿಯನ್ನು ಪ್ರಕಟ ಮಾಡಲಿದೆ. ಇದರಲ್ಲಿ 79 ಮಾಜಿ ಶಾಸಕರಲ್ಲಿ ಬಹುತೇಕರಿಗೆ ಹಾಗೂ ಸೋತ ಕೆಲವು ಅಭ್ಯರ್ಥಿಗಳಿಗೂ ಟಿಕೇಟ್ ನೀಡುವ ಕುರಿತು ಸಭೆ ಈಗಾಗಲೇ ನಿರ್ಣಯ ಕೈಗೊಂಡಿದೆ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಡಿ.ವಿ. ಸದಾನಂದ ಗೌಡ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಬಿಜೆಪಿ ನಾಯಕರು ಹಾಗೂ ಪದಾಧಿಕಾರಿಗಳು ಹಾಜರಾಗಿದ್ದಾರೆ. ಸಭೆಯಲ್ಲಿ ಮಾಜಿ ಶಾಸಕರ ಹೊರತಾಗಿ ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡ ಜಿ.ಟಿ. ದೇವೇಗೌಡ, ಬಚ್ಚೆಗೌಡ ಸೇರಿದಂತೆ ಹಲವು ನಾಯಕರಿಗೆ ಟಿಕೇಟ್ ನೀಡುವ ನಿರ್ಣಯವನ್ನು ತೆಗೆದುಕೊಂಡಿದೆ.
ಈ ಮಧ್ಯೆ ಯುವಕರಿಗೆ ಹಾಗೂ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡುವುದಾಗಿ ಹೇಳಿಕೊಂಡು ಬಂದಿದ್ದ ಬಿಜೆಪಿ ಈ ಕುರಿತು ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.
|