ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷಗಳನ್ನು ಅಧಿಕಾರಕ್ಕೆ ತಂದಾಗ ಮಾತ್ರ ರಾಜ್ಯದ ಏಳಿಗೆ ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಷ್ಠೆ ಉಳಿಸುವ ಪಕ್ಷವನ್ನು ಬೆಂಬಲಿಸುವಂತೆ ಜನತೆಗೆ ಕರೆ ನೀಡಿದ್ದಾರೆ.
ಇಂದು(ಶುಕ್ರವಾರ) ನಗರದಲ್ಲಿ ನಡೆದ ಜೈತ್ರ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳು ಬಂದಾಗ ಕಾಂಗ್ರೆಸ್ ಹಾಗೂ ಬಿಜೆಪಿ ಯಾವ ರೀತಿ ವರ್ತಿಸುತ್ತಿದೆ ಎಂಬುದನ್ನು ಜನತೆಯೇ ಯೋಚಿಸಬೇಕಿದೆ. ಹೊಗೇನಕಲ್ ವಿವಾದವೇ ಇದಕ್ಕೆ ಸಾಕ್ಷಿ ಎಂದು ತಿಳಿಸಿದರು.
ಅಲ್ಲದೆ, ಕಳಸಾ ಬಂಡೂರಿ ನಾಲಾ ಯೋಜನೆ, ರೈಲ್ವೆ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳಿಗೆ ಇನ್ನು ಪರಿಹಾರ ದೊರೆತಿಲ್ಲ. ಇಷ್ಟೆಲ್ಲಾ ರಾಜ್ಯಕ್ಕೆ ಅನ್ಯಾಯವಾದರೂ ಆ ಪಕ್ಷಗಳಿಂದ ಆಯ್ಕೆಯಾದ ರಾಜ್ಯ ಸಂಸದರು ಏಕೆ ಮೌನವಾಗಿದ್ದಾರೆ ಎಂದು ಅವರು ರಾಷ್ಟ್ತ್ರೀಯ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಪ್ರಾತಿನಿಧ್ಯ ನೀಡಿ ಅಧಿಕಾರ ನಡೆಸುತ್ತಿವೆ. ಈ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿ ತಮಗೆ ಬೇಕಾದ ಯೋಜನೆಯನ್ನು ಮಂಜೂರು ಮಾಡಿಕೊಳ್ಳುತ್ತಿವೆ. ಆದ್ದರಿಂದ ರಾಜ್ಯದಲ್ಲೂ ಪ್ರಾದೇಶಿಕ ಪಕ್ಷಗಳ ಅಗತ್ಯವಿದೆ ಎಂದು ಅವರು ಅಭಿಪ್ರಾಯ ಪಟ್ಟರು.
|