ಐಎಎಸ್ಸಿ ದಾಳಿ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಬಾವುದ್ದೀನ್ ಎಂಬಾತನನ್ನು ಭಯೋತ್ಪಾದಕ ನಿಗ್ರಹ ದಳದ ಪೊಲೀಸರು ಬಂಧಿಸಿದ್ದು, ಶನಿವಾರ ನಗರಕ್ಕೆ ಕರೆ ತಂದಿದ್ದಾರೆ.
ಶಂಕಿತ ಉಗ್ರನಾದ ಸಬಾವುದ್ದೀನ್ ಭಾರತೀಯ ವಿಜ್ಞಾನ ಸಂಸ್ಥೆಯ ನಡೆಸಿರುವ ದಾಳಿಯಲ್ಲಿ ಭಾಗಿಯಾಗಿರುವ ಕುರಿತು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಕಮೀಷನರ್ ಎನ್. ಅಚ್ಚುತ್ರಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಸೆರೆ ಸಿಕ್ಕ ಈ ಉಗ್ರ ಇತ್ತೀಚೆಗೆ ಸೆರೆಸಿಕ್ಕಿರುವ ಏಳು ಉಗ್ರರ ಜೊತೆಯಲ್ಲಿ ರಾಜ್ಯದಲ್ಲಿ ಅನೇಕ ವಿದ್ವಂಸಕ ಕೃತ್ಯ ನಡೆಸಲು ಯೋಜಿಸಿದ್ದ ಎನ್ನಲಾಗಿದೆ. ಈತನ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುವ ನಿಟ್ಟಿನಲ್ಲಿ ಇಂದು ರಾಜ್ಯ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರ ಮೂಲದ ಈತ ಅಲಿಗಡ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದ. ಆ ಬಳಿಕ ಗುಜರಾತ್ ಗಲಭೆಯ ಸಂದರ್ಭದಲ್ಲಿ ಸಿಮಿಯ ಸದಸ್ಯ ಅಹಮದ್ ಹಾಗೂ ಆಲಿಯಾಸ್ ಸಾಲಾರ್ ಅವರ ಪರಿಚಯ ಮಾಡಿಕೊಂಡು ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.
|