ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗೋಪಾಲ್ ಕಾಂಗ್ರೆಸ್‌ಗೆ ಸೇರ್ಪಡೆ
ಬಹುಜನ ಸಮಾಜವಾದಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷರಾಗಿದ್ದ ಬಿ. ಗೋಪಾಲ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಕೈ ಬಲಗೊಂಡಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ಚುನಾವಣಾ ಉಸ್ತುವಾರಿ ವಹಿಸಿರುವ ಪೃಥ್ವಿರಾಜ್ ಚೌಹಾಣ್ ಸಮ್ಮುಖದಲ್ಲಿ ಇಂದು (ಭಾನುವಾರ) ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ. ಈ ಮೂಲಕ ಅನೇಕಲ್ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೋಪಾಲ್ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಎಂದು ತಿಳಿದು ಬಂದಿದೆ. ಈ ಮಹತ್ವದ ಬೆಳವಣಿಗೆಯಿಂದ ಬಿಎಸ್ಪಿ ಮತವನ್ನು ತನ್ನೆಡೆಗೆ ಸೆಳೆಯುವ ಪ್ರಯತ್ನದಲ್ಲಿ ಕಾಂಗ್ರೆಸ್ ಸ್ವಲ್ಪ ಮಟ್ಟಿನ ಯಶಸ್ಸು ಕಂಡಿದೆ.

ಗೋಪಾಲ್ ಅವರನ್ನು ಬಿಎಸ್ಪಿ ಇತ್ತೀಚೆಗೆ ಉಚ್ಛಾಟಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಾಗಿಲನ್ನು ತಟ್ಟಿದ್ದರು. ಈ ಸಂಬಂಧ ಪಕ್ಷದ ವರಿಷ್ಠರೊಂದಿಗೆ ಟಿಕೆಟ್ ಹಂಚಿಕೆ ಖಾತ್ರಿಯಾದ ಹಿನ್ನೆಲೆಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.

ಈ ಮಧ್ಯೆ, ಮಾಜಿ ಕೇಂದ್ರ ಸಚಿವರಾಗಿರುವ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಸೇರಲು ಒಲವು ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಈಗಾಗಲೇ ಹಸಿರು ನೀಶಾನೆ ತೋರಿದ್ದಾರೆ ಎನ್ನಲಾಗಿದೆ. ಇನ್ನೆರೆಡು ದಿನಗಳಲ್ಲಿ ಈ ಬಗ್ಗೆ ಪ್ರಕಟಣೆ ಹೊರಬೀಳುವ ಸಾಧ್ಯತೆಗಳಿವೆ. ಕಾಂಗ್ರೆಸ್ ಪಾಳಯದಲ್ಲಿ ಮೂಲ ಹಾಗೂ ವಲಸಿಗರ ನಡುವೆ ಭಿನ್ನಾಭಿಪ್ರಾಯಗಳೇನಿದ್ದರೂ, ಕಾಂಗ್ರೆಸ್ ಪಕ್ಷಕ್ಕೆ ಸೇರುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ.
ಮತ್ತಷ್ಟು
ರಾಜ್ಯಾದ್ಯಂತ ಕಾಂಗ್ರೆಸ್ ಸಮಾವೇಶ
ನಕಲಿ ಮತದಾನ ತಡೆಗೆ ಕಟ್ಟುನಿಟ್ಟಿನ ಕ್ರಮ
ಕರುಣಾನಿಧಿ ನಿರ್ಧಾರಕ್ಕೆ ಬಿಜೆಪಿ ಸ್ವಾಗತ
ರಜನಿ ಸಿನಿಮಾಗಳ ಬಹಿಷ್ಕಾರಕ್ಕೆ ಕರೆ
ಬಿಜೆಪಿಗೆ ಅಧಿಕಾರ: ಅರುಣ್ ಜೇಟ್ಲಿ ವಿಶ್ವಾಸ
ಶಂಕಿತ ಉಗ್ರ ಸಬಾವುದ್ದೀನ್ ನಗರಕ್ಕೆ