ಗ್ರಾಮೀಣ ರೈತರ ಬಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರಿಗೆ ಇರುವ ಕಾಳಜಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಿರುವುದೇ ಉದಾಹರಣೆ ಎಂದು ಕೇಂದ್ರದ ಮಾಜಿ ಸಚಿವ ಜಗದೀಶ್ ಟೈಟ್ಲರ್ ತಿಳಿಸಿದ್ದಾರೆ.
ಈ ಯೋಜನೆಯಿಂದ ಕೋಟ್ಯಾಂತರ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸಲಿದೆ. ಇಂತಹ ಯೋಜನೆ ದೇಶದೆಲ್ಲೆಡೆ ವಿಸ್ತರಿಸಲು ಕಾರಣರಾದ ಸೋನಿಯಾ, ಮನಮೋಹನ್ ಸಿಂಗ್ ಹಾಗೂ ರಾಹುಲ್ ಗಾಂಧಿಯವರಿಗೆ ಅಭಿನಂದನೆ ಸಲ್ಲಿಸಬೇಕೆಂದು ಅವರು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಜನರಿಗೆ 100 ದಿನ ಕೆಲಸ ಕೊಡಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದು. ಅಲ್ಲದೆ, ಗ್ರಾಮೀಣ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಕೇಂದ್ರ ಸರ್ಕಾರದ ಮೂಲ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಎಲ್ಲಾ ವರ್ಗದ ಜನರ ಹಿತಾಸಕ್ತಿ ಕಾಪಾಡುವ ಏಕೈಕ ಪಕ್ಷ ಕಾಂಗ್ರೆಸ್ ಎಂದ ಅವರು, ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರೈತರ ಸಾಲಮನ್ನಾ, ಕೃಷಿಗೆ ಹೆಚ್ಚಿನ ಒತ್ತು, ಹಾಗೆಯೇ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಹೆಚ್ಚು ಹಣ ಮೀಸಲಿಡಲಾಗುವುದು ಎಂದು ತಿಳಿಸಿದರು.
|