ಹೊಗೇನಕಲ್ ಹೊಗೆಯನ್ನು ಶಮನ ಮಾಡಿದ್ದು ತಾನು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.
ಹೊಗೇನಕಲ್ ವಿವಾದಕ್ಕೆ ಸಂಬಂಧಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಧ್ಯಪ್ರವೇಶಿಸಿ ಕರುಣಾನಿಧಿ ಮೇಲೆ ಒತ್ತಡ ಹೇರಿದ್ದರು ಎಂಬುದನ್ನು ತಮಿಳುನಾಡು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ಅಭಿಯಾನದ ಮುಂದಾಳುತ್ವ ವಹಿಸಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಿರಾಕರಿಸಿದ ಮೂರೇ ದಿನಗಳಲ್ಲಿ, ಹಿರಿಯ ಕಾಂಗ್ರೆಸಿಗ ವೀರಪ್ಪ ಮೊಯಿಲಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮಿಳುನಾಡು ಮುಖ್ಯಮಂತ್ರಿ ಜತೆಗೆ ಮಾತನಾಡಿದ್ದರು ಮತ್ತು ಯೋಜನೆ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದರು ಎಂದು ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥರೂ ಆಗಿರುವ ಮೊಯಿಲಿ ಅವರು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ನುಡಿದರು.
ಕರ್ನಾಟಕದಲ್ಲಿ ಹೊಸ ಸರಕಾರ ಸ್ಥಾಪನೆಯಾಗುವವರೆಗೆ ಯೋಜನೆ ತಡೆದಿರುವುದಾಗಿ ಕರುಣಾನಿಧಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ಮತ್ತು ಜೆಡಿಎಸ್, ಇದು ಕಾಂಗ್ರೆಸ್ ಮತ್ತು ಡಿಎಂಕೆ ನಡುವಣ ಒಳಸಂಚು ಎಂದು ಆರೋಪಿಸಿದ್ದವು. ತಕ್ಷಣವೇ ಪ್ರತಿಕ್ರಿಯಿಸಿದ್ದ ಕೃಷ್ಣ ಮತ್ತು ಕರುಣಾನಿಧಿ ಈ ಆರೋಪವನ್ನು ಅಲ್ಲಗಳೆದಿದ್ದರು.
|