ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗೆಲ್ಲಬಲ್ಲವರಿಗಷ್ಟೇ ಕಾಂಗ್ರೆಸ್ ಟಿಕೆಟ್: ಕೃಷ್ಣ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯಲು ಗೆಲ್ಲುವ ಸಾಮರ್ಥ್ಯವೇ ಏಕೈಕ ಮಾನದಂಡ ಎಂದಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಏ.10ಕ್ಕೆ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಮೇಲೆ ಅಭ್ಯರ್ಥಿಗಳ ಆಯ್ಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ರಾಜ್ಯದ ಎಲ್ಲ ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದರ ಜೊತೆಗೆ ಮಹಿಳೆಯರಿಗೂ ಆದ್ಯತೆ ನೀಡಲಾಗುವುದು ಎಂದು ನುಡಿದರು.

ತಾವು ಯಾವುದೇ ಕ್ಷೇತ್ರದಿಂದ ಟಿಕೆಟ್ ಬಯಸಿ ಅರ್ಜಿ ಹಾಕಿಲ್ಲ ಎಂದ ಅವರು, ಕಾಂಗ್ರೆಸ್ ದೊಡ್ಡ ಪಕ್ಷವಾದುದರಿಂದ ಪಕ್ಷಕ್ಕೆ ಸೇರ್ಪಡೆಗೊಳ್ಳುವವರ ಸಂಖ್ಯೆಯೂ ಹೆಚುತ್ತಿದೆ. ಪಕ್ಷದಲ್ಲಿ ಯಾವುದೇ ಬಂಡಾಯ ಅಭ್ಯರ್ಥಿಗಳಿಲ್ಲ ಎಂದಿದ್ದಾರೆ.

ಹೊಗೇನಕಲ್ ವಿವಾದಕ್ಕೆ ಸಂಬಂಧಿಸಿ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರು ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿ ಪ್ರಶ್ನಿಸಿದಾಗ ಪ್ರತಿಕ್ರಿಯಿಸಲು ಕೃಷ್ಣ ನಿರಾಕರಿಸಿದರು.
ಮತ್ತಷ್ಟು
ಬಿಎಸ್ಪಿ: ರಾಜ್ಯದಲ್ಲಿ 20 ಬ್ರಾಹ್ಮಣ ಅಭ್ಯರ್ಥಿಗಳು
ಭ್ರಷ್ಟರ ಸದ್ದಡಗಿಸೋ ಪತಿಯನ್ನು ಅಮಾನತು ಮಾಡಿ!
ಟ್ಯಾಕ್ಸಿ ಸೇವೆ ಮುಂಬೈ ಸಂಸ್ಥೆಗೆ: ಕರವೇ ಪ್ರತಿಭಟನೆ
ಹೊಗೆ ಶಮನ ಮಾಡಿದ್ದು ಸೋನಿಯಾ: ಮೊಯಿಲಿ
ರಜನಿ ಬಹಿಷ್ಕಾರದ ಬಿಸಿ ಮುಂದುವರಿಯುತ್ತಾ?
ಸಭಾವುದ್ದೀನ್ ಮಂಪರು ಪರೀಕ್ಷೆ