ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶೇ.33 ಸ್ಥಾನಕ್ಕೆ 'ಕಾಂಗ್ರೆಸಿಣಿ'ಯರ ಒತ್ತಾಯ
ಮಹಿಳೆಯರಿಗೆ ಮುಂದಿನ ಚುನಾವಣೆಯಲ್ಲಿ ಶೇ. 33ರಷ್ಟು ಸ್ಥಾನ ನೀಡಬೇಕು ಅಥವಾ ಪ್ರತಿ ಜಿಲ್ಲೆಯಲ್ಲಿನ ಕ್ಷೇತ್ರಗಳ ಪೈಕಿ ಎರಡು ಸ್ಥಾನವನ್ನು ಮಹಿಳೆಯರಿಗೆ ಮೀಸಲಿಡಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಕಾರ್ಯಕರ್ತೆಯರು ಬುಧವಾರ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಪೃಥ್ವಿರಾಜ್ ಚೌಹಾಣ್ ಹಾಗೂ ಮಾಜಿ ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ ಅವರಿಗೆ ಮನವಿ ಸಲ್ಲಿಸಯಿತು. ಮಹಿಳೆಯರಿಗೆ ಮುಂದಿನ ಚುಣಾವಣೆಯಲ್ಲಿ ಸೂಕ್ತ ಪ್ರಾತಿನಿಧ್ಯವನ್ನು ನೀಡುವುದಾಗಿ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ ಬಳಿಕ ಮಹಿಳಾ ಕಾರ್ಯಕರ್ತೆಯರು ಧರಣಿಯನ್ನು ಹಿಂದಕ್ಕೆ ತೆಗೆದುಕೊಂಡರು.

ಬಳಿಕ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಚುನಾವಣೆಯಲ್ಲಿ ಬಹುಮತ ಪಡೆಯಲು ಶೇ.33ರಷ್ಟು ಮಹಿಳೆಯರಿಗೆ ಸ್ಥಾನ ನೀಡುವುದು ಸಾಧ್ಯವಿಲ್ಲ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಭರವಸೆ ನೀಡಿದರು.
ಮತ್ತಷ್ಟು
ಗೆಲ್ಲಬಲ್ಲವರಿಗಷ್ಟೇ ಕಾಂಗ್ರೆಸ್ ಟಿಕೆಟ್: ಕೃಷ್ಣ
ಬಿಎಸ್ಪಿ: ರಾಜ್ಯದಲ್ಲಿ 20 ಬ್ರಾಹ್ಮಣ ಅಭ್ಯರ್ಥಿಗಳು
ಭ್ರಷ್ಟರ ಸದ್ದಡಗಿಸೋ ಪತಿಯನ್ನು ಅಮಾನತು ಮಾಡಿ!
ಟ್ಯಾಕ್ಸಿ ಸೇವೆ ಮುಂಬೈ ಸಂಸ್ಥೆಗೆ: ಕರವೇ ಪ್ರತಿಭಟನೆ
ಹೊಗೆ ಶಮನ ಮಾಡಿದ್ದು ಸೋನಿಯಾ: ಮೊಯಿಲಿ
ರಜನಿ ಬಹಿಷ್ಕಾರದ ಬಿಸಿ ಮುಂದುವರಿಯುತ್ತಾ?