ಜೆಡಿಎಸ್ ಬೆಂಬಲವಿಲ್ಲದೆ ಯಾರೂ ರಾಜ್ಯದಲ್ಲಿ ಸರ್ಕಾರ ರಚಿಸುವುದು ಅಸಾಧ್ಯ ಎಂದು ಹೇಳಿಕೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡ ಅವರ ಮಾತಿಗೆ ಪ್ರತಿಕ್ರಿಯಿಸಿರುವ ಖರ್ಗೆ, ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಎದುರಾಗುವುದಿಲ್ಲ ಎಂದು ಹೇಳಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಬೆಂಬಲವಿಲ್ಲದೆ ಯಾರೂ ರಾಜ್ಯದಲ್ಲಿ ಸರ್ಕಾರ ರಚಿಸುವುದು ಅಸಾಧ್ಯ ಎಂದು ಹೇಳಿಕೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡ ಅವರ ಮಾತಿಗೆ ಪ್ರತಿಕ್ರಿಯಿಸಿರುವ ಖರ್ಗೆ, ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಎದುರಾಗುವುದಿಲ್ಲ ಎಂದು ಹೇಳಿದ್ದಾರೆ.
ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಶಕ್ತವಾಗಿದೆ. ಈ ನಿಟ್ಟಿನಲ್ಲಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರವನ್ನು ಪಡೆಯಲಿದೆ ಎಂದು ತಿಳಿಸಿದರು. ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿರುವುದನ್ನು ಅಲ್ಲಗೆಳೆದ ಖರ್ಗೆ, ಕಾಂಗ್ರೆಸ್ ಪಕ್ಷ ಮೊಕದ್ದಮೆ ದಾಖಲಿಸುವಷ್ಟು ನೀಚವಾಗಿಲ್ಲ ಎಂದು ನುಡಿದರು.
|