ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎರಡು ಕ್ಷೇತ್ರದಲ್ಲಿ ಯಡಿಯೂರಪ್ಪ ಸ್ಪರ್ಧೆ
ಶಿಕಾರಿಪುರದಿಂದ ಬಂಗಾರಪ್ಪ ಕಣಕ್ಕೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ ಕೋಲಾರ ಜಿಲ್ಲೆಯ ಮಾಲೂರಿನಿಂದ ಸ್ಪರ್ಧಿಸುವ ನೀರೀಕ್ಷೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಖಾತರಿಯಾಗಿದೆ. ಆದರೆ ಈ ಕ್ಷೇತ್ರದಿಂದಲೇ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಕೂಡ ಸ್ಪರ್ಧಿಸುವ ಸುದ್ದಿ ಬಂದಿರುವ ಬೆನ್ನಲ್ಲೆ ಯಡಿಯೂರಪ್ಪ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಮಾಲೂರು ಬಿಜೆಪಿಗೆ ಅತ್ಯಂತ ಸುರಕ್ಷಿತ ಪ್ರದೇಶ ಎಂಬುದು ನಾಯಕರ ಲೆಕ್ಕಚಾರ. ಈ ನಿಟ್ಟಿನಲ್ಲಿ ಬಿಜೆಪಿ ಯಡಿಯೂರಪ್ಪನವರನ್ನು ಎರಡೆರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಕುರಿತು ಚರ್ಚೆ ನಡೆಸುತ್ತಿದೆ. ಆದರೆ ಈ ಬಗ್ಗೆ ಇನ್ನು ಅಧಿಕೃತವಾಗಿ ಪ್ರಕಟಣೆ ಹೊರಬೀಳಬೇಕಾಗಿದೆ.

ಈ ಮಧ್ಯೆ ಬಂಗಾರಪ್ಪನವರನ್ನು ಪಕ್ಷಕ್ಕೆ ಸೇರಿಸುವ ಪ್ರಯತ್ನಕ್ಕೆ ಕಾಂಗ್ರೆಸ್ ತೆರೆಮರೆಯಲ್ಲಿ ಕಸರತ್ತು ಪ್ರಾರಂಭಿಸಿದೆ. ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿಕೆ ನೀಡಿದ್ದರೂ, ಕೆಲ ಕಾಂಗ್ರೆಸ್ಸಿಗರು ಯಡಿಯೂರಪ್ಪನವರನ್ನು ಸೋಲಿಸಲು ಬಂಗಾರಪ್ಪನವರೇ ಉತ್ತಮ ಸ್ಪರ್ಧಿ ಎಂಬುವ ಲೆಕ್ಕಚಾರದಲ್ಲಿ ಕಾಂಗ್ರೆಸ್‌ನತ್ತ ಚಿತ್ತ ಹರಿಸುವಂತೆ ಪ್ರಯತ್ನ ನಡೆಸುತ್ತಿದಾರೆ. ಈ ಹಿನ್ನೆಲೆಯಲ್ಲಿ ಬಂಗಾರಪ್ಪನವರೂ ಕೂಡ ಇಂದು ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತಷ್ಟು
ಸಿದ್ದಾಂತ ಮರೆತ ಬಿಜೆಪಿ, ಜೆಡಿಎಸ್: ಸಿಬಲ್
ಮುರುಡೇಶ್ವರ ರಾಜಗೋಪುರ ಲೋಕಾರ್ಪಣೆ
ಬಿಜೆಪಿಯೊಳಗೆ ಬಂಡಾಯವಿಲ್ಲ: ಡಿವಿಎಸ್
ಬಿಕ್ಕಟ್ಟು ನಿವಾರಣೆಗೆ ದೌಡಾಯಿಸಿದ ಜೇಟ್ಲಿ
ನಮಗಾರ ಹಂಗೂ ಬೇಕಿಲ್ಲ: ಯಡಿಯೂರ್
ಖೊಟ್ಟಿ ಅಂಕಪಟ್ಟಿ ಸಲ್ಲಿಸಿದ 18 ಶಿಕ್ಷಕರಿಗೆ ಶಿಕ್ಷೆ