ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಲಸಿಗರ ಬಗ್ಗೆ ಖರ್ಗೆ ಪರೋಕ್ಷ ಅಸಮಾಧಾನ
ಚುನಾವಣೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ದಿಲ್ಲಿಯ ಹೈಕಮಾಂಡ್ ಗಮನ ಹರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸೋಮವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಈ ರೀತಿ ಮಾತನಾಡುವ ಮೂಲಕ ಅವರು, ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗರ ನಡುವೆ ಅಸಮಾಧಾನ ಇನ್ನೂ ಹೊಗೆಯಾಡುತ್ತಿದೆ ಎಂಬುದನ್ನು ಪರೋಕ್ಷವಾಗಿ ಬಿಂಬಿಸಿದರು.

ಟಿಕೆಟ್ ಆಕಾಂಕ್ಷಿಗಳ ಒತ್ತಡ ಹಿಂದೆಂದಿಗಿಂತ ಈ ಬಾರಿ ಹೆಚ್ಚಿದೆ. ನಿನ್ನೆ ದಾವಣಗೆರೆಯಲ್ಲಿ ನಡೆದ ರೈತರ ಬೃಹತ್ ಸಮಾವೇಶವೂ ಯಶಸ್ವಿಯಾಗಿದೆ. ಈ ಎರಡೂ ಅಂಶಗಳು ಕಾಂಗ್ರೆಸ್ ಪಕ್ಷದ ಗೆಲುವಿನ ಮುನ್ಸೂಚನೆಗಳಾಗಿವೆ ಎಂದು ಖರ್ಗೆ ಇದೇ ಸಂದರ್ಭದಲ್ಲಿ ಪ್ರತಿಪಾದಿಸಿದರು.

ಕೆಲವು ಸಂದರ್ಭಗಳಲ್ಲಿ ಅರ್ಹರಿಗೆ ಅವಕಾಶ ದೊರೆಯುವುದಿಲ್ಲ. ಆದರೆ ಪಕ್ಷದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಭಿನ್ನಾಭಿಪ್ರಾಯಗಳನ್ನು ಬದಿಗೆ ಸರಿಸಿ ದುಡಿದರೆ ಜಯ ನಿಶ್ಚಿತ ಎಂದು ಖರ್ಗೆ ಈ ಸಂದರ್ಭದಲ್ಲಿ ನುಡಿದರು.
ಮತ್ತಷ್ಟು
ಟಿಕೆಟ್ ನಿರಾಸೆ: ಬಿಜೆಪಿಯಲ್ಲಿ ಭಿನ್ನಮತದ ಹೊಗೆ
ಪ್ರಣಾಳಿಕೆ ಇಲ್ಲ, ಉಪವಾಸ: ಮಹಿಮಾ ಪಕ್ಷ ತಂತ್ರ
ಕನ್ನಡ ಸಾಹಿತ್ಯ ದಿಗ್ಗಜ ಶಾಂತರಸ ಇನ್ನಿಲ್ಲ
ಬಿಜೆಪಿಯ 2ನೇ ಪಟ್ಟಿ: ಅಸಮಾಧಾನ ಸ್ಫೋಟ
ಎನ್ಕೌಂಟರ್ ದಯಾನಾಯಕ್ ಕಾಂಗ್ರೆಸ್‌ಗೆ?
ಎರಡು ಕ್ಷೇತ್ರದಲ್ಲಿ ಯಡಿಯೂರಪ್ಪ ಸ್ಪರ್ಧೆ