ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ಪಟ್ಟಿ ಬಳಿಕ ಜೆಡಿಎಸ್ ಪಟ್ಟಿ
ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ಮುಂದಾಗಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನೂ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಮೊದಲ ಹಂತದಲ್ಲಿ ನಡೆಯುವ 90 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಏ. 18 ಅಥವಾ 20 ರಂದು ಜೆಡಿಎಸ್ ಪ್ರಕಟಿಸಲಿದೆ. ಇದೇ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನೂ ಪ್ರಕಟಿಸುವುದಾಗಿ ಹೊಳೇನರಸೀಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಟಿಕೆಟ್ ಹಂಚಿಕೆಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಚಿಂತನೆ ನಡೆದಿದೆ. ಆದರೆ ಎಲ್ಲಾ ಜಿಲ್ಲೆಗಳಲ್ಲಿಯೂ ಮಹಿಳಾ ಆಭ್ಯರ್ಥಿಗಳಿಗೆ ಟಿಕೆಟ್ ನೀಡಲು ಸಾಧ್ಯವಾಗದಿರಬಹುದು. ಎಲ್ಲೆಲ್ಲಿ ಗೆಲ್ಲುವ ಅವಕಾಶವಿದೆಯೋ ಅಂತಹ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟೆಕೆಟ್ ನೀಡಲಾಗುತ್ತದೆ ಎಂದು ದೇವೇಗೌಡರು ಹೇಳಿದರು.

ಜೆಡಿಎಸ್ ಬೆಂಬಲವಿಲ್ಲದೆ ಯಾವುದೇ ಪಕ್ಷವೂ ರಾಜ್ಯದಲ್ಲಿ ಸರ್ಕಾರ ರಚಿಸುವುದಿಲ್ಲ ಅಥವಾ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗುತ್ತದೆ ಎಂದು ತಾವು ಎಲ್ಲಿಯೂ ಹೇಳಿಲ್ಲ. ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದ ಅವರು ಜೆಡಿಎಸ್ ಬಹುಮತ ಪಡೆದು ಸ್ವಂತ ಶಕ್ತಿಯಿಂದಲೇ ಅಧಿಕಾರ ಹಿಡಿಯಲಿದೆ ಎಂದು ಅವರು ತಿಳಿಸಿದರು.
ಮತ್ತಷ್ಟು
ಓಟಿಗಾಗಿ ಅಂಬೇಡ್ಕರ್ ಚಿತ್ರ ಬಳಸುವ ಬಿಜೆಪಿ: ಜಯಕುಮಾರ್
ಬಿಜೆಪಿಯಲ್ಲಿ ಬಂಡಾಯದ ಹೊಗೆ: ವರಿಷ್ಠರಿಗೆ ದೂರಲು ನಿರ್ಧಾರ
ವಲಸಿಗರ ಬಗ್ಗೆ ಖರ್ಗೆ ಪರೋಕ್ಷ ಅಸಮಾಧಾನ
ಟಿಕೆಟ್ ನಿರಾಸೆ: ಬಿಜೆಪಿಯಲ್ಲಿ ಭಿನ್ನಮತದ ಹೊಗೆ
ಪ್ರಣಾಳಿಕೆ ಇಲ್ಲ, ಉಪವಾಸ: ಮಹಿಮಾ ಪಕ್ಷ ತಂತ್ರ
ಕನ್ನಡ ಸಾಹಿತ್ಯ ದಿಗ್ಗಜ ಶಾಂತರಸ ಇನ್ನಿಲ್ಲ