ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕುಮಾರ ಸ್ವಾಮಿ-ದೇವೇಗೌಡ ಮಾತುಕತೆ
ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿಗಳಾರೂ ತಮ್ಮ ಪಕ್ಷದಲ್ಲಿ ಇಲ್ಲದ ಕಾರಣ ಅಂತವರಿಗೆ ಟಿಕೆಟ್ ನೀಡುವುದಿಲ್ಲ ಎಂಬ ವಿಚಾರವನ್ನು ಪ್ರಸ್ತಾಪಿಸುವ ಅಗತ್ಯವೇ ಇಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ ಕುರಿತು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಈಗಾಗಲೇ 117 ಅಭ್ಯರ್ಥಿಗಳ ಆಯ್ಕೆ ಪೂರ್ಣಗೊಂಡಿದ್ದು, ಪಕ್ಷದ ವರಿಷ್ಠರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆಯ್ಕೆ ಪ್ರಕ್ರಿಯೆ ಕುರಿತು ಮಾತನಾಡಿದ ಕುಮಾರಸ್ವಾಮಿ, ಪ್ರತಿಯೊಬ್ಬ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡ ಬಳಿಕವೇ ಪಟ್ಟಿಯನ್ನು ತಯಾರಿಸಲಾಗಿದೆ ಎಂದು ತಿಳಿಸಿದರು.

ಈ ಮಧ್ಯೆ, ಇಂದು ಪಕ್ಷದ ಅಭ್ಯರ್ಥಿಗಳ ಆಯ್ಕೆಯ ಕುರಿತು ಚರ್ಚೆ ಮುಂದುವರೆಸಿರುವ ಕುಮಾರಸ್ವಾಮಿ ಅವರು ಪಕ್ಷದ ವರಿಷ್ಠರಾದ ಎಚ್.ಡಿ. ದೇವೇಗೌಡರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಇನ್ನು ಒಂದು ವಾರದ ಒಳಗಾಗಿ ಮೊದಲ ಹಂತದ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಬೇಕಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕುಗೊಂಡಿದೆ. ಈ ಮಧ್ಯೆ ಜೆಡಿಎಸ್ ಕಾಯ್ದು ನೋಡುವ ತಂತ್ರಕ್ಕೆ ಮುಂದಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಂತಿಮ ಪಟ್ಟಿ ಪ್ರಕಟಿಸಿದ ಬಳಿಕವೇ ಜೆಡಿಎಸ್ ಪಟ್ಟಿ ಬಿಡುಗಡೆಗೊಳ್ಳಲಿದ್ದು, ಈ ತಿಂಗಳ 22ರಂದು ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮತ್ತಷ್ಟು
ಕಾಂಗ್ರೆಸ್‌ಗೆ ಮುಜುಗರ ಹುಟ್ಟಿಸಿದ ಲಾಡ್
ಎಚ್ಎಎಲ್: ತಡೆಯಾಜ್ಞೆಗೆ ಹೈಕೋರ್ಟ್ ನಕಾರ
ಗುರುತಿನ ಚೀಟಿಗಾಗಿ ವಿವಿಧೆಡೆ ಡ್ರಾಪ್ ಬಾಕ್ಸ್
ಮೊದಲ ದಿನದಲ್ಲಿ 7 ನಾಮಪತ್ರ ಸಲ್ಲಿಕೆ
ಚುನಾವಣಾ ಫಲಿತಾಂಶದ ಬಳಿಕ ಗಣಿ ಹಗರಣ ಬಯಲು
ಹಾಸನ: ಭೀಕರ ಅಪಘಾತಕ್ಕೆ ನಾಲ್ಕು ಬಲಿ