ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ 7 ಮನೆಗಳು ಜಖಂಗೊಂಡಿದ್ದು, ನಾಲ್ಕು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಇಂದು (ಶನಿವಾರ) ರಾಜಗೋಪಾಲನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಗೋವಿಂದರಾಜು ಎಂಬುವವರ ಪುತ್ರ ವೇಣುಗೋಪಾಲ್ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಸ್ಪೋಟದಿಂದ ಆರು ಮಂದಿ ಗಾಯಗೊಂಡಿದ್ದು, ಹತ್ತಿರದ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪೀಣ್ಯ 2ನೇ ಹಂತದ ರಾಮಣ್ಣ ಲೇಓಟ್ ಹೆಗ್ಗನಹಳ್ಳಿ ಮುಖ್ಯರಸ್ತೆಯಲ್ಲಿರುವ ನಾಗಾರಾಜ್ ಎಂಬುವವರ 2 ಅಂತಸ್ತಿನ ಕಟ್ಟಡದಲ್ಲಿ ಈ ದುರ್ಘಟನೆ ನಡೆದಿದೆ. ಅವರ ಎರಡು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 8 ಮನೆಗಳಿದ್ದವು. ಒಂದು ಮನೆಯಲ್ಲಿ ವಾಸವಾಗಿದ್ದ ಸುಧಾಕರ್ ವಿದ್ಯುತ್ ದೀಪದ ಸ್ವಿಚ್ ಆನ್ ಮಾಡುತ್ತಿದ್ದಂತೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಪೋಟಗೊಂಡಿದೆ ತಿಳಿದು ಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳ ಜೊತೆಯಲ್ಲಿ ಸ್ಥಳಕ್ಕಾಗಮಿಸಿದ ಅಗ್ನಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದರು. ಈ ಘಟನೆಯಿಂದ ಟೀ ಮಾರಿ ಜೀವನ ಸಾಗಿಸುತ್ತಿದ್ದ ಸುಧಾಕರ್ ಕುಟುಂಬ ಬೀದಿ ಪಾಲಾಗಿದೆ.
|