ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ ಎದುರಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅನಂತ್‌ಕುಮಾರ್ ವ್ಯಂಗ್ಯವಾಡಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸ್ಫರ್ಧಿಸುವುದು ಎಂದರೆ ಸೋಲುವ ಹೋರಾಟ ಎಂದು ಕಾಂಗ್ರೆಸ್ ಮುಖಂಡರಿಗೆ ಮನವರಿಕೆಯಾಗಿದೆ. ಸೂಕ್ತ ಅಭ್ಯರ್ಥಿಗಳು ಸಿಗದೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಅವರಿಂದ ಸಾಧ್ಯವಾಗುತ್ತಿಲ್ಲ ಎಂದು ಅನಂತ್‌ಕುಮಾರ್ ಗೇಲಿಮಾಡಿದ್ದಾರೆ.
ಕೋರಮಂಗಲ 5 ನೇ ಬ್ಲಾಕ್‌ನಲ್ಲಿ ಬಿಟಿಎಂ ಲೇಓಟ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜಿ. ಪ್ರಸಾದ್ ರೆಡ್ಡಿ ಪರ ಪ್ರಚಾರ ಭಾಷಣ ಮಾಡಿದ ಅನಂತಕುಮಾರ್, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪ್ರಕಟಿಸುವ ಯೋಗ್ಯತೆ ಕಾಂಗ್ರೆಸ್ ಪಕ್ಷಕ್ಕಿಲ್ಲದಿರುವುದು ಪಕ್ಷದ ಪರಿಸ್ಥಿತಿಯನ್ನು ತೋರಿಸುತ್ತದೆ ಎಂದು ಲೇವಡಿ ಮಾಡಿದರು.
ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡಿರುವ ಸಿದ್ಧರಾಮಯ್ಯ ಪಕ್ಷದಿಂದ ಹೊರಬರುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಅನಂತ್‌ಕುಮಾರ್ ಅಭಿಪ್ರಾಯಪಟ್ಟರು.
|